ದೇಶ

ರೆವಾರಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಸಿಬಿಎಸ್'ಸಿ ಟಾಪರ್ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಹರಿಯಾಣ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...

ರೆವಾರಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Published On :
ಚಂಡೀಗಢ: ಸಿಬಿಎಸ್'ಸಿ ಟಾಪರ್ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಹರಿಯಾಣ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 
ಯೋಧ ಮನೀಷ್ ಮತ್ತು ಪಂಕಜ್ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಡಿಜಿಪಿ ಬಿ.ಎಸ್. ಸಂಧು ಅವರು ಹೇಳಿದ್ದಾರೆ. 
ಘಟನೆಯಲ್ಲಿ ಮನೀಷ್ ಹಾಗೂ ಪಂಕಜ್ ಪ್ರಮುಖ ಆರೋಪಿಗಳಾಗಿದ್ದು, ಘಟನೆ ಬಳಿಕ ಇಬ್ಬರೂ ತಲೆ ಮರೆಸಿಕೊಂಡಿದ್ದರು ಎಂತು ತಿಳಿಸಿದ್ದಾರೆ. 
ರಾಷ್ಟ್ರದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಿಶು ಹಾಗೂ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿತ್ತು. 
ಸಿಬಿಎಸ್‌ಇ ಪರೀಕ್ಷೆಯಲ್ಲಿ ದೇಶಕ್ಕೇ ಟಾಪರ್ ಆಗಿ, ರಾಷ್ಟ್ರಪತಿಗಳಿಂದ ಸನ್ಮಾನ ಸ್ವೀಕರಿಸಿದ 19 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಗುರಗಾಂವ್ ನಿಂದ 116 ಕಿಲೋಮೀಟರ್ ದೂರದ ಬಸ್‌ ನಿಲ್ದಾಣವೊಂದರಲ್ಲಿ ಅರೆ ನಗ್ನ ಸ್ಥಿತಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿ ಪತ್ತೆಯಾಗಿದ್ದಳು. ಕೂಡಲೇ ಸ್ಥಳೀಯರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಸಾಮೂಹಿಕ ಅತ್ಯಾಚಾರ ವಿಚಾರ ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ ಹರಿಯಾಣ ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.