ದೇಶ

ಆಂಧ್ರಪ್ರದೇಶ: ಇಬ್ಬರು ಟಿಡಿಪಿ ನಾಯಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಮಹಿಳಾ ಮಾವೋವಾದಿಗಳು!

ಟಿಡಿಪಿ ಶಾಸಕ ಸರ್ವೇಶ್ವರ್ ರಾವ್ ಅವರನ್ನು ಮಾವೋವಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಆಂಧ್ರಪ್ರದೇಶ: ಇಬ್ಬರು ಟಿಡಿಪಿ ನಾಯಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಮಹಿಳಾ ಮಾವೋವಾದಿಗಳು!
ಸರ್ವೇಶ್ವರ್ ರಾವ್
Published On :
ವಿಶಾಖಪಟ್ಟಣ: ಟಿಡಿಪಿ ಶಾಸಕ ಸರ್ವೇಶ್ವರ್ ರಾವ್ ಅವರೂ ಸೇರಿದಂತೆ ಒಟ್ಟು ಇಬ್ಬರು ಟಿಡಿಪಿ ನಾಯಕರನ್ನು ಮಹಿಳಾ ಮಾವೋವಾದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 
ವಿಶಾಖಪಟ್ಟಣದ ಅರಕು ವ್ಯಾಲಿಯಲ್ಲಿ ಘಟನೆ ನಡೆದಿದ್ದು, ಶಾಸಕರೊಂದಿಗಿದ್ದ ಮತ್ತೋರ್ವ ಟಿಡಿಪಿ ನಾಯಕನೂ ಮಾವೋವಾದಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಸರ್ವೇಶ್ವರ್ ರಾವ್ ಹಾಗೂ ಮತ್ತೋರ್ವ ಟಿಡಿಪಿ ನಾಯಕ, ಮಾಜಿ ಶಾಸಕನ ಸಿವೆರಿ ಸೋಮಾ ಅವರನ್ನೂ ಹತ್ಯೆ ಮಾಡಲಾಗಿದೆ. ಇಬ್ಬರೂ ನಾಯಕರು ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. 
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ನಾಯಕರನ್ನು ಮಾವೋವಾದಿಗಳು ಹತ್ಯೆ ಮಾಡಿದ್ದು, ಇದಕ್ಕೂ ಮುನ್ನ ಮಹಿಳಾ ಮಾವೋವಾದಿಗಳು-ಟಿಡಿಪಿ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗುತ್ತಿದೆ. ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸುವಂತೆ ಮಾವೋವಾದಿ ನಾಯಕರು ಸರ್ವೇಶ್ವರ್ ರಾವ್ ಅವರಿಗೆ ಎಚ್ಚರಿಸಿದರು. ಈ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಮಹಿಳಾ ಮಾವೋವಾದಿಗಳು ಶಾಸಕ, ಮಾಜಿ ಶಾಸಕನ ಮೇಲೆ ಗುಂಡು ಹಾರಿಸಿದ್ದು, ಆಂಧ್ರ-ಒಡಿಶಾ ಗಡಿ ಭಾಗದಲ್ಲಿದ್ದ ತಂಡ ಇದಾಗಿದೆ ಎಂದು ಹೇಳಲಾಗುತ್ತಿದೆ. ವೈಎಸ್ ಆರ್ ಕಾಂಗ್ರೆಸ್ ನಲ್ಲಿದ್ದ ಸರ್ವೇಶ್ವರ್ ರಾವ್ 2016 ರಲ್ಲಿ ಟಿಡಿಪಿಗೆ ಸೇರ್ಪಡೆಯಾಗಿದ್ದರು. ಹುಕುಂಪೇಟ್ ಮಂಡಲ್ ನಲ್ಲಿ ತಮ್ಮ ಸಂಬಂಧಿಕರ ಹೆಸರಿನಲ್ಲಿ ಗಣಿಗಾರಿಕೆ ಪರವಾನಗಿ ಪಡೆದಿದ್ದಕ್ಕಾಗಿ ಬುಡಕಟ್ಟು ಜನಾಂಗದವರು ಗಿರಿಜನ ಸಂಘಂ ಬ್ಯಾನರ್ ನಡಿ ಪ್ರತಿಭಟನೆ ನಡೆಸುತ್ತಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.