ಜಮ್ಮು-ಕಾಶ್ಮೀರ: ಗಡಿ ನುಸುಳುತ್ತಿದ್ದ 3 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಸೋಮವಾರ ಹೊಡೆದುರುಳಿಸಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಸೋಮವಾರ ಹೊಡೆದುರುಳಿಸಿದೆ.
ಕುಪ್ವಾರ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನಲೆಯಲ್ಲಿ ಸೇನೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ.
ಉಗ್ರರ ವಿರುದ್ಧ ನಡೆಸಲಾದ ಕಾರ್ಯಾಚರಣೆ ವೇಳೆ ಓರ್ವ ಯೋಧ ಕೂಡ ಹುತಾತ್ಮರಾಗಿದ್ದಾರೆಂದು ತಿಳಿಸಿದ್ದಾರೆ.
ನಿನ್ನೆ ಕೂಡ ಇದೇ ಪ್ರದೇಶದಲ್ಲಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಹತ್ಯೆ ಮಾಡಿತ್ತು. ಇದೀಗ ಮತ್ತೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಒಟ್ಟು ಐವರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


