ದೇಶ

ರಾಫೆಲ್ ವಿವಾದದಲ್ಲಿ ರಾಹುಲ್ ಗೆ ಪಾಕಿಸ್ತಾನದ ಬೆಂಬಲ: ಬಿಜೆಪಿ

ರಾಫೆಲ್ ವಿವಾದದಲ್ಲಿ ಆಡಳಿತ ಪಕ್ಷ-ವಿಪಕ್ಷಗಳ ಆರೋಪ ಪ್ರತ್ಯಾರೋಪಗಳು ಮುಂದುವರೆದಿದ್ದು ರಾಹುಲ್ ಗಾಂಧಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಫೆಲ್ ವಿವಾದದಲ್ಲಿ ರಾಹುಲ್ ಗೆ ಪಾಕಿಸ್ತಾನದ ಬೆಂಬಲ: ಬಿಜೆಪಿ
ಬಿಜೆಪಿ ವಕ್ತಾರ ಸಂಬಿತ್ ಪಾತ್ರ
Published On :
ರಾಫೆಲ್ ವಿವಾದದಲ್ಲಿ ಆಡಳಿತ ಪಕ್ಷ-ವಿಪಕ್ಷಗಳ ಆರೋಪ ಪ್ರತ್ಯಾರೋಪಗಳು ಮುಂದುವರೆದಿದ್ದು ರಾಹುಲ್ ಗಾಂಧಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. 
ರಾಫೆಲ್ ವಿಚಾರದಲ್ಲಿ ರಾಹುಲ್ ಗಾಂಧಿಗೇಕೆ ಗಡಿಯಾಚೆಗೂ ಹಲವಾರು ನಾಯಕರು ಬೆಂಬಲ ಸೂಚಿಸುತ್ತಿದ್ದಾರೆ, ಕಾಂಗ್ರೆಸ್ ಹಾಗೂ ಪಾಕಿಸ್ತಾನಕ್ಕಿರುವ ಸಮಾನ ಅಂಶಗಳು ಏನು? ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಪ್ರಶ್ನಿಸಿದ್ದಾರೆ. ಭಾರತದ ರಾಜಕೀಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಪಾಕಿಸ್ತಾನ ಒಂದೇ ರೀತಿಯ ಭಾಷೆಯನ್ನು ಮಾತನಾಡುತ್ತಿವೆ, ಕಾಂಗ್ರೆಸ್ ಹಾಗೂ ಪಾಕಿಸ್ತಾನ ಎರಡೂ ಬಯಸುತ್ತಿರುವುದು ಮೋದಿಯನ್ನು ಹೇಗಾದರೂ ಮಾಡಿ ಅಧಿಕಾರದಿಂದ ಕೆಳಗಿಳಿಸಬೇಕೆಂಬುದಾಗಿದೆ ಎಂದು ಸಂಬಿತ್ ಪಾತ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 
ಪಾಕಿಸ್ತಾನ ಸಚಿವ ಚೌಧರಿ ಫಾಹದ್ ಹುಸೇನ್ ರಾಹುಲ್ ಗಾಂಧಿ ರಾಫೆಲ್ ಹಗರಣದ ಬಗ್ಗೆ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.