ಪಂಜಾಬ್ , ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: 8 ಸಾವು !
ಉತ್ತರ ಭಾರತದ ಬೆಟ್ಟ ಗುಡ್ಡಗಳ ರಾಜ್ಯ ಹಿಮಾಚಲ ಪ್ರದೇಶ, ಹರಿಯಾಣ,ಹಾಗೂ ಜಮ್ಮು- ಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದ್ದು, ಮಳೆ ಸಂಬಂಧಿತ ಅನಾಹುತಗಳಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ಉತ್ತರ ಭಾರತದ ಬೆಟ್ಟ ಗುಡ್ಡಗಳ ರಾಜ್ಯ ಹಿಮಾಚಲ ಪ್ರದೇಶ, ಹರಿಯಾಣ,ಹಾಗೂ ಜಮ್ಮು- ಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದ್ದು, ಮಳೆ ಸಂಬಂಧಿತ ಅನಾಹುತಗಳಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಪಂಜಾಬಿನಲ್ಲಿ ರೆಡ್ ಆಲರ್ಟ್ ಘೋಷಿಸಲಾಗಿದೆ. ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಹಿಮಾಚಲ ಪ್ರದೇಶ ಹಾಗೂ ಜಮ್ಮು-ಕಾಶ್ಮೀರದಲ್ಲಿನ ಬಹುತೇಕ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಬದ್ರಿನಾಥ್, ಕೇದರ್ ನಾಥ್, ಯಮುನೇತ್ರಿಗಳಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಚಾರ್ ದಾಮ್ ಯಾತ್ರೆ ಕೈಗೊಂಡಿದ್ದ ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಧಾರಾಕಾರ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಯಿತು.
ಮಳೆಯಿಂದಾಗಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪಂಜಾಬ್ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಪರಿಸ್ಥಿತಿ ನಿಬಾಯಿಸಲು ಸಿದ್ಧರಿರುವಂತೆ ಸೈನಿಕರಿಗೆ ತಿಳಿಸಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಮಳೆಯಿಂದಾಗಿ ಹರಿಯಾಣದಲ್ಲಿ ಅಂಬಾಲ ಎಂಬ 45 ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಯಾಸ್ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹದಿಂದಾಗಿ ಅನೇಕ ಮನೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.ಭಾರತೀಯ ವಾಯುಪಡೆ ಸಿಬ್ಬಂದಿ ಹೆಲಿಕಾಪ್ಟರ್ ಗಳ ಸಹಾಯದಿಂದ 21 ಸಂತ್ರಸ್ತರನ್ನು ರಕ್ಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


