ದೇಶ

ಹಿಜ್ಬುಲ್ ಮುಜಾಹಿದ್ದೀನ್ ಎಚ್ಚರಿಕೆ: ಕಾಶ್ಮೀರದಲ್ಲಿ ಈ ವರೆಗೂ 40 ಪೊಲೀಸರ ರಾಜಿನಾಮೆ!

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿದ್ದು, ಮೂವರು ಪೊಲೀಸರನ್ನು ಉಗ್ರರು ಅಪಹರಿಸಿಕೊಂದು ಹಾಕಿದ ಬೆನ್ನಲ್ಲೇ ಬೆಚ್ಚಿ ಬಿದ್ದಿರುವ ಕಾಶ್ಮೀರದ ಸ್ಥಳೀಯ ಪೊಲೀಸರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ.

ಹಿಜ್ಬುಲ್ ಮುಜಾಹಿದ್ದೀನ್ ಎಚ್ಚರಿಕೆ: ಕಾಶ್ಮೀರದಲ್ಲಿ ಈ ವರೆಗೂ 40 ಪೊಲೀಸರ ರಾಜಿನಾಮೆ!
ಸಂಗ್ರಹ ಚಿತ್ರ
Published On :
ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿದ್ದು, ಮೂವರು ಪೊಲೀಸರನ್ನು ಉಗ್ರರು ಅಪಹರಿಸಿಕೊಂದು ಹಾಕಿದ ಬೆನ್ನಲ್ಲೇ ಬೆಚ್ಚಿ ಬಿದ್ದಿರುವ ಕಾಶ್ಮೀರದ ಸ್ಥಳೀಯ ಪೊಲೀಸರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ಕಳೆದ ಶುಕ್ರವಾರದಿಂದ ಈ ವರೆಗೂ ಸುಮಾರು 40 ಮಂದಿ ಪೊಲೀಸ್ ಅಧಿಕಾರಿಗಳು ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನಕಲಿ ವಿಡಿಯೋ ಆಗಿದ್ದು, ಇದರಿಂದ ಹೆದರುವ ಅವಶ್ಯಕತೆ ಇಲ್ಲ. ಪೊಲೀಸರ ರಕ್ಷಣೆ ನಮ್ಮ ಹೊಣೆ ಎಂದು ಹೇಳಿದೆ.
ಈ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಬಿವಿಆರ್ ಸುಬ್ರಮಣಿಯಮ್ ಅವರು, ರಾಜ್ಯದಲ್ಲಿರುವ ಎಸ್ ಪಿಒ ಅಧಿಕಾರಿಗಳಿಗೆ ಹೋಲಿಕೆ ಮಾಡಿದರೆ ರಾಜಿನಾಮೆ ನೀಡಿರುವ ಅಧಿಕಾರಿಗಳ ಸಂಖ್ಯೆ ತೀರಾ ಕಡಿಮೆ. ರಾಜ್ಯದಲ್ಲಿ ಸುಮಾರು 30 ಸಾವಿರ ಎಸ್ ಪಿಒ ಅಧಿಕಾರಿಗಳಿದ್ದು, ಈ ವರೆಗು 40 ಅಧಿಕಾರಿಗಳು ಮಾತ್ರ ರಾಜಿನಾಮೆ ನೀಡಿದ್ದಾರೆ. ಹೀಗಾಗಿ ಎಸ್ ಪಿಒ ಅಧಿಕಾರಿಗಳು ಉಗ್ರರಿಗೆ ಹೆದರಿದ್ದಾರೆ ಎಂಬ ತರ್ಕ ಸರಿಯಲ್ಲ. ಉಗ್ರರ ಮಟ್ಟ ಹಾಕಲು ಸೇನೆ ಸನ್ನದ್ಧವಾಗಿದ್ದು, ಉಗ್ರರ ಅಟ್ಟಹಾಸ ಮುಂದುವರೆಯಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಕಳೆದವಾರವಷ್ಚೇ ಕಾಶ್ಮೀರದ ಪುಲ್ವಾಮದಿಂದ ನಾಲ್ಕು ಎಸ್ ಪಿಒ ಅಧಿಕಾರಿಗಳನ್ನು ಉಗ್ರರು ಅಪಹರಣ ಮಾಡಿದ್ದರು. ಈ ಪೈಕಿ ಮೂವರು ಅಧಿಕಾರಿಗಳು ಉಗ್ರರು ಕೊಂದು ಹಾಕಿದ್ದರು. ಓರ್ವ ಅಧಿಕಾರಿ ಸ್ಥಳೀಯರ ನೆರವಿನಿಂದಾಗಿ ತಪ್ಪಿಸಿಕೊಂಡಿದ್ದ. ಬಳಿಕ ಹೇಳಿಕೆ ಬಿಡುಗಡೆ ಮಾಡಿದ್ದ ಉಗ್ರರು ಭದ್ರತಾ ಪಡೆಗಳಲ್ಲಿ ಕೆಲಸ ಮಾಡುತ್ತಿರುವ ಕಾಶ್ಮೀರಿಗರು ಕೂಡಲೇ ರಾಜಿನಾಮೆ ನೀಡಬೇಕು ಇಲ್ಲವೇ ಸಾಯಲು ಸಿದ್ಧರಾಗಿ ಎಂದು ಬೆದರಿಕೆ ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.