ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಫಲಹರಿ ಮಹಾರಾಜ್ ಗೆ ಜೀವಾವಧಿ ಶಿಕ್ಷೆ !
21 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ 70 ವರ್ಷದ ಸ್ವಯಂ ಘೋಷಿತ ದೇವಮಾನವ ಕೌಶಲೇಂದ್ರ ಪ್ರಪನಾಚಾರ್ಯ ಫಲಹರಿ ಮಹಾರಾಜ್ ಗೆ ರಾಜಸ್ತಾನದ ಅಳ್ವಾರ್ ಜಿಲ್ಲೆಯ ನ್ಯಾಯಾಲಯ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿದೆ.

ಅಳ್ವಾರ್ : 21 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ 70 ವರ್ಷದ ಸ್ವಯಂ ಘೋಷಿತ ದೇವಮಾನವ ಕೌಶಲೇಂದ್ರ ಪ್ರಪನಾಚಾರ್ಯ ಫಲಹರಿ ಮಹಾರಾಜ್ ಗೆ ರಾಜಸ್ತಾನದ ಅಳ್ವಾರ್ ಜಿಲ್ಲೆಯ ನ್ಯಾಯಾಲಯ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿದೆ.
ಅಲ್ಲದೇ 1 ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಶರ್ಮಾ ತೀರ್ಪು ಪ್ರಕಟಿಸಿದ್ದಾರೆ.
ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು ಎಂದು ಆರೋಪಿ ಪರ ವಕೀಲ ಅಶೋಕ್ ಶರ್ಮಾ ತಿಳಿಸಿದ್ದಾರೆ.
ಹಣವನ್ನು ದಾನವಾಗಿ ನೀಡಲು ಆಶ್ರಮಕ್ಕೆ ಹೋಗಿದ್ದಾಗ ಫಲಹರಿ ಮಹಾರಾಜ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಯುವತಿ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಪ್ರಕರಣ ದಾಖಲಿಸಿದ್ದರು.
ಈ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 376 ( ಅತ್ಯಾಚಾರ ) 506 ( ಅಪರಾಧ ಉದ್ದೇಶ ) ಅಡಿಯಲ್ಲಿ ಸ್ವಯಂ ಘೋಷಿತ ದೇವಮಾನವನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಳೆದ ವರ್ಷ ಸೆಪ್ಟೆಂಬರ್ 20 ರಂದು ಬಂಧಿಸಲಾಗಿತ್ತು.
ನಂತರ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಪರೀಕ್ಷೆ ಮಾಡಿಸಿದ ಪೊಲೀಸರು ಆತನ ಆಶ್ರಮದಿಂದ ಲ್ಯಾಪ್ ಟಾಪ್, ಸಿಡಿ, ಮತ್ತು ಸಿಸಿಟಿವಿ ಕ್ಯಾಮರಾಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಕಳೆದ ವರ್ಷ ಆಕ್ಟೋಬರ್ ತಿಂಗಳಲ್ಲಿ ನ್ಯಾಯಾಲಯದಲ್ಲಿ ಪೊಲೀಸರು ಚಾರ್ಚ್ ಶೀಟ್ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


