ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ; ಪತ್ನಿಗೆ ಪತಿಯು ಮಾಲೀಕನಲ್ಲ: ಸುಪ್ರೀಂ ಕೋರ್ಟ್
ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ ಎಂದು ಹೇಳಿರುವ ಸರ್ವೋಚ್ಛ ನ್ಯಾಯಾಲಯ, ಪತ್ನಿಗೆ ಪತಿಯೇ ಮಾಲಿಕನಲ್ಲ,...

Published On :
ನವದೆಹಲಿ: ನವದೆಹಲಿ: ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ ಎಂದು ಹೇಳಿರುವ ಸರ್ವೋಚ್ಛ ನ್ಯಾಯಾಲಯ, ಪತ್ನಿಗೆ ಪತಿಯೇ ಮಾಲಿಕನಲ್ಲ, ಮಹಿಳೆ-ಪುರುಷರು ಇಬ್ಬರು ಸಮಾನರು ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ.
ಸೆಕ್ಷನ್ 497ರ ಅಸಾಂವಿಧಾನಿಕ ತೀರ್ಪು ಎಂದು ಸುಪ್ರೀಂಕೋರ್ಟ್ ಹೇಳಿದೆ, ಅನೈತಿಕ ಸಂಬಂಧದ ಕುರಿತು ತೀರ್ಪು ಓದಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಕಾನೂನಿನ ಪ್ರಕಾರ, ಗಂಡನೇ ಎಲ್ಲದಕ್ಕೂ ಮುಖ್ಯಸ್ಥನಲ್ಲ, ಮಹಿಳೆಗೂ ಗೌರವ ತೋರಬೇಕು. ಮಹಿಳೆಯರ ಜೊತೆ ಅಗೌರವದ ವರ್ತನೆ ಸರಿಯಲ್ಲ, ಮಹಿಳೆಯರಿಗೆ ಅಗೌರವ ತೋರುವ ಕಾನೂನು ಸಾಂವಿಧಾನಿಕವಲ್ಲ ಎಂದು ದೀಪಕ್ ಮಿಶ್ರ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠ ಅಭಿಪ್ರಾಯ ಪಟ್ಟಿದೆ.
ಪತ್ನಿಯ ಪ್ರಿಯಕರನ ಬಗ್ಗೆ ಪ್ರಶ್ನಿಸುವ ವಿಚಾರಿಸುವ ಹಕ್ಕು ಪತಿಗೆ ಇದೆ ಎಂದಾದರೇ, ಪತಿಯ ಪ್ರಿಯತಮೆಯ ಬಗ್ಗೆ ವಿಚಾರಣೆ ನಡೆಸುವ ಹಕ್ಕು ಪತ್ನಿಗೇಕಿಲ್ಲ , ಕಾನೂನಿನ ಪ್ರಕಾರ, ಮಹಿಳೆಗೆ ತನ್ನ ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸುವ ಹಕ್ಕಿಲ್ಲ ಎಂದು ಇದೆ, ಆದರೆ ಅದು ಸರಿಯಲ್ಲಿ, ಪತ್ನಿಗೂ ಪ್ರಶ್ನಿಸುವ ಅಧಿಕಾರವಿದೆ ಎಂದು ಸುಪ್ರೀಂ ಅಭಿಪ್ರಾಯ ಪಟ್ಟಿದೆ. ಪತಿ ಅವಿವಾಹಿತೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದಾನೆಯೇ ಇಲ್ಲವೇ ಎಂಬುದು ಪರಿಗಣನೆಗೆ ಇಲ್ಲ ಎಂದು ತೀರ್ಪಿನಲ್ಲಿ ಹೇಳಿದೆ.
ಪ್ರಾಣಾಪಾಯ ತರದ ವಿವಾಹ ಬಾಹಿರ ಸಂಬಂಧವನ್ನು ಅಪರಾಧ ಎಂದು ಪರಿಗಣಿಸಲಾಗದು ಎಂದು ಹೇಳುವ ಮೂಲಕ, 150 ವರ್ಷದ ಹಳೇಯ ಕಾನೂನನ್ನು ಅಸಂವಿಧಾನಿಕ ಎಂದು ಹೇಳಿದೆ. ವಿವಾಹ ಬಾಹಿರ ಸಂಬಂಧ ತೀರಾ ಖಾಸಗಿ ವಿಚಾರವಾಗಿದ್ದು, ಅನೇಕ ದೇಶಗಳು ಇದನ್ನು ಅಪರಾಧ ಮುಕ್ತಗೊಳಿಸಿವೆ.
ಐಪಿಸಿ ಸೆಕ್ಷನ್ 407 ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಸಂವಿಧಾನ ಪೀಠ ನಡೆಸಿತ್ತು. ವಿವಾಹದ ಪಾವಿತ್ರ್ಯತೆ ಕಾಪಾಡಲು ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಕಾನೂನು ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್criminal offenceadulteryಅನೈತಿಕ ಸಂಬಂಧDeepak Mishraಕ್ರಿಮಿನಲ್ ಪ್ರಕರಣವಲ್ಲಜೀಪಕ್ ಮಿಶ್ರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


