ಅಯೋಧ್ಯೆಗೆ ಸಂಬಂಧಿಸಿದ ತೀರ್ಪು: ಅಂತಿಮ ತೀರ್ಪಿಗೆ ಮಾರ್ಗ ಮುಕ್ತವಾಗಿದೆ- ಸುಬ್ರಹ್ಮಣಿಯನ್ ಸ್ವಾಮಿ
ಅಯೋಧ್ಯೆಗೆ ಸಂಬಂಧಿಸಿದ ಮಸೀದಿ ಇಸ್ಲಾಂ ನ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಈ ತೀರ್ಪಿನಿಂದಾಗಿ

Published On :
ನವದೆಹಲಿ: ಅಯೋಧ್ಯೆಗೆ ಸಂಬಂಧಿಸಿದ ಮಸೀದಿ ಇಸ್ಲಾಂ ನ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಈ ತೀರ್ಪಿನಿಂದಾಗಿ ಅಯೋಧ್ಯೆ ರಾಮ ಮಂದಿರ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪಿಗೆ ಮಾರ್ಗ ಮುಕ್ತವಾಗಿದೆ ಎಂದು ಹೇಳಿದ್ದಾರೆ.
ಟೈಮ್ಸ್ ನೌ ವಾಹಿನಿಯೊಂದಿಗೆ ತೀರ್ಪಿನ ಬಗ್ಗೆ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಈ ತೀರ್ಪು ವಾಸ್ತವದಲ್ಲಿ ಗೆಲುವಲ್ಲ, ಆದರೆ ಈ ತೀರ್ಪಿನ ಆಧಾರದಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ಅಂತಿಮ ತೀರ್ಪಿಗೆ ಇದ್ದ ಅಡ್ಡಿ ನಿವಾರಣೆಯಾಗಿದೆ, ಪ್ರಾರ್ಥನೆ ಸಲ್ಲಿಸುವ ಹಕ್ಕು, ಆಸ್ತಿಯ ಹಕ್ಕಿಗಿಂತ ಹೆಚ್ಚು ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.
ಅಯೋಧ್ಯೆ ರಾಮ ಜನ್ಮ ಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ತಮ್ಮ ಅರ್ಜಿಯ ವಿಚಾರಣೆಯನ್ನು ಪರಿಗಣಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡುವುದಾಗಿ ಸುಬ್ರಹ್ಮಣಿಯನ್ ಸ್ವಾಮಿ ಇದೇ ವೇಳೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Subramanian SwamyRam MandirಮಸೀದಿAyodhyaಅಯೋಧ್ಯೆರಾಮ ಮಂದಿರಸುಬ್ರಹ್ಮಣಿಯನ್ ಸ್ವಾಮಿmasjid
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


