ದೇಶ

ಮಹಿಳೆಯರು ಶಬರಿಮಲೆ ಪ್ರವೇಶಿಸುತ್ತಾರಾ?: ಇಂದು ಸುಪ್ರೀಂ ಕೋರ್ಟ್ ತೀರ್ಪು

ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ಕುರಿತು ಸುಪ್ರೀಂ ಕೋರ್ಟ್ ನ...

ಮಹಿಳೆಯರು ಶಬರಿಮಲೆ ಪ್ರವೇಶಿಸುತ್ತಾರಾ?: ಇಂದು ಸುಪ್ರೀಂ ಕೋರ್ಟ್ ತೀರ್ಪು
ಶಬರಿಮಲೆ ದೇವಸ್ಥಾನ
Published On :
ನವದೆಹಲಿ: ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ಕುರಿತು ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಶುಕ್ರವಾರ ಮತ್ತೊಂದು ಮಹತ್ವದ ತೀರ್ಪು ನೀಡಲಿದೆ.
ಇಂದು ಅನೈತಿಕ ಸಂಬಂಧ, ಆಯೋದ್ಯ ವಿವಾದ ಹಾಗೂ ನಿನ್ನೆ ಆಧಾರ್ ಕುರಿತು ಮಹತ್ವದ ತೀರ್ಪು ನೀಡಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ ನಾಳೆ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು ತೀರ್ಪು ನೀಡಲಿದೆ.
ಶಬರಿಮಲೆ ದೇಗುಲಕ್ಕೆ 10 ರಿಂದ 50 ವರ್ಷದ ಮಹಿಳೆಯರಿಗೂ ಪ್ರವೇಶ ನೀಡಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ| ದೀಪಕ್‌ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ಆಗಸ್ಟ್ 1ರಂದು ತೀರ್ಪು ಕಾಯ್ದಿರಿಸಿದೆ.
2006ರಲ್ಲಿ ಇಂಡಿಯನ್‌ ಯಂಗ್‌ ಲಾಯರ್ಸ್‌ ಅಸೋಸಿಯೇಶನ್‌ ಹಾಗೂ ಇತರರು ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ದಶಕದ ನಂತರ 2016ರ ಜನವರಿಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಕಳೆದ ಅಕ್ಟೋಬರ್ 13ರಂದು ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಲಾಗಿತ್ತು.
ಈಗಾಗಲೇ ಹಿಂದಿನ ಹಲವು ವಿಚಾರಣೆ ವೇಳೆ ಮಹಿಳೆಯರ ಪ್ರವೇಶದ ಪರವಾಗಿ ಮಾತನಾಡಿರುವ ಸುಪ್ರೀಂ ಕೋರ್ಟ್, ಪುರುಷರಂತೆ ಮಹಿಳೆರಿಗೂ ಸಮಾನವಾಗಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಹೇಳಿದೆ.
ಎಲ್ಲೆಲ್ಲಿ ಪುರುಷರು ಹೋಗಬಹುದೋ ಅಲ್ಲಿಗೆ ಮಹಿಳೆಯರೂ ತೆರಳಬಹುದು. ಪುರುಷರಿಗೆ ಅನ್ವಯಿ ಸುವ ಸಂಗತಿಗಳೆಲ್ಲವೂ ಮಹಿಳೆಯರಿಗೂ ಅನ್ವಯಿಸುತ್ತವೆ. ದೇಗುಲಕ್ಕೆ ಪ್ರವೇಶಿಸುವುದು ಶಾಸನವನ್ನು ಆಧರಿಸಿಲ್ಲ. ಇದು ಸಾಂವಿಧಾನಿಕ ಹಕ್ಕು. ಇದಕ್ಕೆ ಸಂಬಂಧಿಸಿದಂತೆ ಸಂವಿಧಾನದ 25 ಹಾಗೂ 26ನೇ ಕಲಂನಲ್ಲಿ ವಿವರಿಸ ಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.