ದೇಶ

ಕೇಂದ್ರದಿಂದ ಲೋಕಪಾಲ್ ನೇಮಕಕ್ಕೆ ಶೋಧನಾ ಸಮಿತಿ, ಸುಪ್ರೀಂ ಮಾಜಿ ನ್ಯಾಯಮೂರ್ತಿ ರಂಜನ್ ದೇಸಾಯಿ ಸಾರಥ್ಯ

ಭ್ರಷ್ಠಾಚಾರ ನಿಗ್ರಹಕ್ಕಾಗಿ ಸ್ಥಾಪಿತವಾಗಲಿರುವ ಲೋಕಪಾಲ್ ಸಂಸ್ಥೆಯ ಅಧ್ಯಕ್ಷ ಹಾಗೂ ಸದಸ್ಯರ ಶಿಫಾರಸು ಮಾಡಲು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿಗಳಾದ ರಂಜನಾ ಪ್ರಕಾಶ್ ದೇಸಾಯಿ ....

ಕೇಂದ್ರದಿಂದ ಲೋಕಪಾಲ್ ನೇಮಕಕ್ಕೆ ಶೋಧನಾ ಸಮಿತಿ, ಸುಪ್ರೀಂ ಮಾಜಿ ನ್ಯಾಯಮೂರ್ತಿ  ರಂಜನ್ ದೇಸಾಯಿ ಸಾರಥ್ಯ
ಸಂಗ್ರಹ ಚಿತ್ರ
Published On :
ನವದೆಹಲಿ: ಭ್ರಷ್ಠಾಚಾರ ನಿಗ್ರಹಕ್ಕಾಗಿ ಸ್ಥಾಪಿತವಾಗಲಿರುವ ಲೋಕಪಾಲ್ ಸಂಸ್ಥೆಯ ಅಧ್ಯಕ್ಷ ಹಾಗೂ ಸದಸ್ಯರ ಶಿಫಾರಸು ಮಾಡಲು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿಗಳಾದ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದಲ್ಲಿ ಎಂಟು ಸದಸ್ಯರ ಶೋಧನಾ ಸಮಿತಿಯನ್ನು ಕೇಂದ್ರ ಸರ್ಕಾರ ರಚನೆ ಮಾಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ,ಪ್ರಸಾರ ಭಾರತಿ ಅಧ್ಯಕ್ಷರಾದ ಎ.ಸೂರ್ಯ ಪ್ರಕಾಶ್ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಎ.ಎಸ್. ಕಿರಣ್ ಕುಮಾರ್ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಸಿಬ್ಬಂದಿ ಸಚಿವಾಲಯ ನೀಡಿದ ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ.
ಅವರಲ್ಲದೆ, ಅಲಹಾಬಾದ್ ಹೈಕೋರ್ಟ್ ನ ಮಾಜಿ ನ್ಯಾಯಾಧೀಶರಾದ ಸಖರಾಮ್ ಸಿಂಗ್ ಯಾದವ್, ಗುಜರಾತಿನ ಮಾಜಿ ಪೋಲೀಸ್ ಮುಖ್ಯಸ್ಥ ಶಬ್ಬೀರ್ ಹುಸೇನ್ ಎಸ್. ಖಂಡೇವಾಲಾ, ರಾಜಸ್ಥಾನ ಕೇಡರ್ ನ ನಿವೃತ್ತ ಐಈಸ್ ಅಧಿಕಾರಿ ಲಲಿತ್ ಕೆ. ಪನ್ವಾರ್, ಮತ್ತು ರಂಜಿತ್ ಕುಮಾರ್ ಸಮಿತಿಯ ಇತರೆ ಸದಸ್ಯರಾಗಿದ್ದಾರೆ.
ಲೋಕಪಾಲ್ ಸ್ಥಾಪನೆಗೆ ಶೋಧನಾ ಸಮಿತಿ ರಚನೆಯು ಒಂದು ಪ್ರಮುಖ ಘಟ್ಟವಾಗಿದ್ದು ಸಮಿತಿ ಅತಿ ಶೀಘ್ರವಾಗಿ ತನ್ನ ಕಾರ್ಯವನ್ನು ಪ್ರಾರಂಭಿಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.