ವ್ಯಾಪಂ ಹಗರಣ: ಕಾಂಗ್ರೆಸ್‌ಗೆ ಸಂಕಷ್ಟ, ದಿಗ್ವಿಜಯ್, ಕಮಲನಾಥ್ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ!
ಮಧ್ಯಪ್ರದೇಶದಲ್ಲಿ ನಡೆದಿದ್ದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್, ಕಮಲನಾಥ್, ಜ್ಯೋತಿರಾಧಿತ್ಯ ಮತ್ತು ಆರ್ಟಿಐ...

Published On :
ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದಿದ್ದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್, ಕಮಲನಾಥ್, ಜ್ಯೋತಿರಾಧಿತ್ಯ ಮತ್ತು ಆರ್ಟಿಐ ಕಾರ್ಯಕರ್ತನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ.
ಸಾಕ್ಷಿಗಳನ್ನು ತಯಾರಿಸಿದ ಆರೋಪ ಮೇಲೆ ಈ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಸುರೇಶ್ ಸಿಂಗ್ ಮಧ್ಯಪ್ರದೇಶ ಪೊಲೀಸರಿಗೆ ಆದೇಶಿಸಿದ್ದಾರೆ.
ಮಧ್ಯಪ್ರದೇಶದ ವಕೀಲರಾದ ಸಂತೋಷ್ ಶರ್ಮಾ ಎಂಬುವರು ಬುಧವಾರ ಖಾಸಗಿ ದೂರು ದಾಖಲಿಸಿದ್ದು ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶವನ್ನು ನೀಡಿದೆ.
‘ವ್ಯಾಪಂ’( Vyapam-Madhya Pradesh Vyavasayik Pariksha Mandal) ಹಗರಣ ಎಂದೇ ಕುಖ್ಯಾತಿ ಪಡೆದಿದೆ. ವೈದ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಪರವಾಗಿ ಇನ್ನೊಬ್ಬರು ಭಾಗಿಯಾಗಿರುವುದನ್ನು ಗಮನಿಸಿದ ವೈದ್ಯರಾದ ಡಾ. ಆನಂದ್ ರಾಯ್ ಅವರು 2013ರಲ್ಲಿ ಈ ಹಗರಣವನ್ನು ಬಯಲು ಮಾಡಿದ್ದರು.
ವ್ಯಾಪಂ ಹಗರಣ?
ಮಧ್ಯಪ್ರದೇಶದ ವೃತ್ತಿಪರ ಶಿಕ್ಷಣ ಅಥವಾ ವ್ಯವಸಾಯಿಕ್ ಪರೀಕ್ಷಾ ಮಂಡಲ್(ವ್ಯಾಪಂ) ಮಧ್ಯಪ್ರದೇಶದ ಸ್ವಾಯತ್ತ ಸಂಸ್ಥೆಯಾಗಿದೆ. 1970ರಲ್ಲಿ ಪ್ರಾರಂಭಗೊಂಡ ಈ ಸಂಸ್ಥೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆಗಳನ್ನು ಆಯೋಜಿಸುತ್ತದೆ. ವೃತ್ತಿ ಶಿಕ್ಷಣ ಪ್ರವೇಶ, ವೈದ್ಯರು, ಕಾನ್‌ಸ್ಟೆಬಲ್, ಶಿಕ್ಷಕರು ಮತ್ತಿತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಗಳನ್ನು ಈ ಮಂಡಳಿ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Digvijay SinghCongressಕಾಂಗ್ರೆಸ್ದಿಗ್ವಿಜಯ್ ಸಿಂಗ್CourtFIRMadhya Pradeshಎಫ್ಐಆರ್ಮಧ್ಯಪ್ರದೇಶಕೋರ್ಟ್ವ್ಯಾಪಂ ಹಗರಣVyapam Case
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


