ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸುಪ್ರೀಂ ಆದೇಶ :ನಿಲುವು ಸಮರ್ಥಿಸಿಕೊಂಡ ಬಿಜೆಪಿ
ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ನೀಡಿರುವ ತೀರ್ಪಿನಲ್ಲಿ ನಮ್ಮ ನಿಲುವನ್ನು ಸಮರ್ಥಿಸಲಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದೆ.

ನವದೆಹಲಿ:ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ನೀಡಿರುವ ತೀರ್ಪಿನಲ್ಲಿ ನಮ್ಮ ನಿಲುವನ್ನು ಸಮರ್ಥಿಸಲಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದ್ದು, ಕಾಂಗ್ರೆಸಿಗೆ ಸೋಲಾಗಿದೆ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಆಟವಾಡುವ ರಾಹುಲ್ ಗಾಂಧಿಗೆ ಅವಮಾನವಾಗಿದ್ದು, ಕೊರಳಿಗೆ ತಾನೇ ತಲೆಯೊಡ್ಡುವಂತಾಗಿದೆ ಎಂದು ಹೇಳಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಬಂಧಿಸಿರುವ ಐವರು ಸಾಮಾಜಿಕ ಹೋರಾಟಗಾರರ ವಿಚಾರದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಬಂಧನ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ ನೇಮಕಮಾಡಲು ನಿರಾಕರಿಸಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಬಿಜೆಪಿ ವಕ್ತಾರ ಸಂಬೀತ್ ಪಾತ್ರ, ಇದು ದೇಶಕ್ಕೆ ಚಾರಿತ್ರಿಕ ದಿನವಾಗಿದೆ. ಸುಪ್ರೀಂ ಆದೇಶದ ಮೂಲಕ ದೇಶದ ಭದ್ರತೆ ಹಾಗೂ ಸುರಕ್ಷತೆ ವಿಚಾರದಲ್ಲಿ ಗೆಲುವಾಗಿದೆ ಎಂದರು.
ರಾಹುಲ್ ಗಾಂಧಿಗೆ ದೇಶದ ಭದ್ರತೆ ವಿಚಾರಕ್ಕಿಂತಲೂ ರಾಜಕೀಯ ಅಜೆಂಡಾವೇ ಪ್ರಮುಖವಾಗಿದೆ. ದೇಶದೊಂದಿಗೆ ಏಕೆ ನಿಲುವು ತೆಗೆದುಕೊಳ್ಳುವುದಿಲ್ಲ. ನಿಮ್ಮ ನಿಲುವು ಏಕೆ ದೇಶ ವಿರೋಧಿ ಶಕ್ತಿಗಳೊಂದಿಗಿರುತ್ತದೆ ಎಂದು ಪ್ರಶ್ನಿಸಿದರು.
ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ ಸಂಬೀತ್ ಪಾತ್ರ,ಕಾಂಗ್ರೆಸ್ ಪಕ್ಷದ ಮಿತ್ರ ಪಕ್ಷಗಳೇ ರಾಹುಲ್ ಗಾಂಧಿಯನ್ನು ನಾಯಕನೆಂದು ಒಪ್ಪಿಕೊಂಡಿಲ್ಲ.ತನ್ನನ್ನು ತಾನೇ ಸಮರ್ಥಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು. ಸರ್ಜಿಕಲ್ ಸ್ಟ್ರೈಕ್ ನ ಎರಡನೇ ವಾರ್ಷಿಕೋತ್ಸವ ಅಂಗವಾಗಿ ನಾಳೆ ಬಿಜೆಪಿ ವತಿಯಿಂದ ಶೌರ್ಯ ದಿವಸ್ ಆಚರಿಸುತ್ತಿರುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


