ದೇಶ

ಅಕ್ಟೋಬರ್ 4-5ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ: ಪುಟಿನ್- ಪ್ರಧಾನಿ ಮೋದಿ ನಡುವೆ ಮಹತ್ವದ ಮಾತುಕತೆ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಅಕ್ಟೋಬರ್ 4-5 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ರಾಜಧಾನಿ ದೆಹಲಿಯಲ್ಲಿ ಆಗಮಿಸಲಿರುವ ಪುಟಿನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ...

ಅಕ್ಟೋಬರ್ 4-5ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ:  ಪುಟಿನ್- ಪ್ರಧಾನಿ ಮೋದಿ ನಡುವೆ ಮಹತ್ವದ ಮಾತುಕತೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ (ಸಂಗ್ರಹ ಚಿತ್ರ)
Published On :
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಅಕ್ಟೋಬರ್ 4-5 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ರಾಜಧಾನಿ ದೆಹಲಿಯಲ್ಲಿ ಪುಟಿನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ಶನಿವಾರ ತಿಳಿದುಬಂದಿದೆ. 
19ನೇ ಇಂಡೋ-ರಷ್ಯನ್ ಶೃಂಗಸಭೆ ಹಿನ್ನಲೆಯಲ್ಲಿ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ. 
ಕಳೆದ ಬಾರಿಯ ಶೃಂಗಸಭೆ 2017ರಲ್ಲಿ ಸೆಂಟ್ ಪೀಟರ್ ಬರ್ಗ್ ನಲ್ಲಿ ನಡೆದಿತ್ತು. ಕಳೆದ ಮೇ ತಿಂಗಳಿನಲ್ಲಿ ಮೋದಿ ಹಾಗೂ ಪುಟಿನ್ ಅವರು ಸೋಚಿಯಲ್ಲಿ ನಡೆದ ಅನೌಪಚಾರಿಕ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದ್ದರು. 
ಇದೀಗ ಮತ್ತೆ 19ನೇ ಇಂಡೋ-ರಷ್ಯನ್ ಶೃಂಗಸಭೆ ಅ.4-5 ರಂದು ನಡೆಯಲಿದ್ದು, ಶೃಂಗಸಭೆ ಹಿನ್ನಲೆಯಲ್ಲಿ ಪುಟಿನ್ ಅವರು ರಾಜಧಾನಿ ದೆಹಲಿಗೆ ಆಗಮಿಸುತ್ತಿದ್ದಾರೆ. ಪುಟಿನ್ ಭಾರತಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಅಮೆರಿಕಾದಿಂದ ನಿರ್ಬಂಧ ಹೇರಿಕೆ ಆತಂಕದ ನಡುವಲ್ಲೇ ರಷ್ಯಾದಿಂದ ಆತ್ಯಾಧುನಿಕ ಕ್ಷಿಪಣಿ ನಿರೋಧಕ ವ್ಯವಸ್ಥೆ ಎಸ್-400 ಖರೀದಿಗೆ ಸಂಪುಟ ಸಮಿತಿ ಒಪ್ಪಿದೆ ನೀಡಿದೆ. 

ಸಂಪುಟ ಸಮಿತಿ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಎಸ್-400 ಖರೀದಿ ಮಾಡುವ ಕುರಿತ ಒಪ್ಪಂದಕ್ಕೆ ಸಹಿ ಹಾಕಿದ 24 ತಿಂಗಳ ಬಳಿಕ ಮೊದಲ ಎಸ್-400 ಭಾರತಕ್ಕೆ ಆಗಮಿಸಲಿದೆ. ಇನ್ನುಳಿದ ವಾಯು ರಕ್ಷಣಾ ಕ್ಷಿಪಣಿಗಳು ಮುಂದಿನ 4-5 ವರ್ಷಗಳ ಬಳಿಕ ಭಾರತವನ್ನು ತಲುಪಲಿವೆ ಎಂದು ಹೇಳಲಾಗುತ್ತಿದೆ. 

ಸೆ.21 ರಂದು ಹೇಳಿಕೆ ನೀಡಿದ್ದ ಅಮೆರಿಕಾ ಭಾರತ, ರಷ್ಯಾದಿಂದ ಎಸ್‌–400 ಟ್ರಯಂಫ್ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ ಖರೀದಿಸಲು ಮುಂದಾದರೆ ಅಮೆರಿಕದ ನಿರ್ಬಂಧಗಳಿಗೆ ಆಹ್ವಾನ ನೀಡಿದಂತಾಗುತ್ತದೆ ಎಂದು ಹೇಳಿತ್ತು.

400 ಕಿ.ಮೀ. ದೂರದಲ್ಲಿರುವ ಮತ್ತು 30 ಕಿ.ಮೀ ಎತ್ತರದಿಂದ ದಾಳಿಗೆ ಚಿಮ್ಮಿಬರುತ್ತಿರುವ ಶತ್ರುಪಡೆಯ ಬಾಂಬರ್​ಗಳು, ಯುದ್ಧವಿಮಾನ, ಕ್ಷಿಪಣಿ, ಡ್ರೋನ್, ಗೂಢಚರ್ಯು ವಸ್ತುಗಳನ್ನು ಹೊಡೆದುರುಳಿಸಬಲ್ಲ ಶಕ್ತಿ ಎಸ್- 400ಗೆ ಇದೆ. ಜತೆಗೆ ಆಧುನಿಕ ರೆಡಾರ್​ಗಳ ಸಹಾಯದಿಂದ ತನ್ನ ರಕ್ಷಣೆಯನ್ನು ಕೂಡ ಮಾಡಿಕೊಳ್ಳಬಲ್ಲ ವ್ಯವಸ್ಥೆಯನ್ನು ಇದರಲ್ಲಿ ಅಳವಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.