ಆಲ್ವಾರ್ ಹತ್ಯೆ: ಕೋರ್ಟ್ ಗೆ ತೆರಳುತ್ತಿದ್ದ ಪೆಹ್ಲು ಖಾನ್ ಪುತ್ರ, ಸಾಕ್ಷಿಗಳ ಮೇಲೆ ಗುಂಡಿನ ದಾಳಿ
ರಾಜಸ್ಥಾನದಲ್ಲಿ ಗೋರಕ್ಷಕರಿಂದ ಹತ್ಯೆಯಾದ ಹರ್ಯಾಣ ಮೂಲದ ಪೆಹ್ಲು ಖಾನ್ ಅವರ ಪುತ್ರ ಇರ್ಷಾದ್ ಹಾಗೂ...

Published On :
ಜೈಪುರ: ರಾಜಸ್ಥಾನದಲ್ಲಿ ಗೋರಕ್ಷಕರಿಂದ ಹತ್ಯೆಯಾದ ಹರ್ಯಾಣ ಮೂಲದ ಪೆಹ್ಲು ಖಾನ್ ಅವರ ಪುತ್ರ ಇರ್ಷಾದ್ ಹಾಗೂ ಇತರೆ ಪ್ರಮುಖ ಸಾಕ್ಷಿಗಳ ಮೇಲೆ ದುಷ್ಕರ್ಮಿಗಳು ಶನಿವಾರ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೆಹ್ಲು ಖಾನ್ ಹತ್ಯೆ ಪ್ರಕರಣದಲ್ಲಿ ಇರ್ಷಾದ್ ಹಾಗೂ ಇತರರು ಪ್ರತ್ಯಕ್ಷದರ್ಶಿಗಳಾಗಿದ್ದು, ಇಂದು ರಾಜಸ್ಥಾನದ ಬೆಹ್ರೋಡ್ ಕೋರ್ಟ್ ಗೆ ವಿಚಾರಣೆಗೆ ತೆರಳುತ್ತಿದ್ದ ವೇಳೆ ಅವರ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಈ ಸಂಬಂಧ ಇರ್ಷಾದ್ ಅವರು ಅಲ್ವಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನನ್ನ ಕಾರಿನಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ದೂರಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ನಮಗೆ ಕಾರು ನಿಲ್ಲಿಸುವಂತೆ ಕೇಳಿಕೊಂಡರು. ಆದರೆ ನಾವು ಕಾರು ನಿಲ್ಲಿಸದಿದ್ದಾಗ ನಮ್ಮ ಕಾರಿನ ಮೇಲೆ ಗುಂಡು ಹಾರಿಸಿದರು ಎಂದು ಇರ್ಷಾದ್ ಆರೋಪಿಸಿದ್ದಾರೆ.
ಪ್ರಕರಣದ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಮತ್ತು ಇರ್ಷಾದ್ ಅವರು ನೀಡಿದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುವುದು ಎಂದು ಆಲ್ವಾರ್ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


