ನಾಚಿಕೆ ಇಲ್ಲದ ಕಾಂಗ್ರೆಸ್ ಪಟೇಲರನ್ನು ಚೀನಾ ಶೂ, ಶರ್ಟ್ ಗಳಿಗೆ ಹೋಲಿಕೆ ಮಾಡುತ್ತಿದೆ: ಮೋದಿ
ಗುಜರಾತ್ ನ ನರ್ಮದಾ ನದಿ ತೀರದಲ್ಲಿ ನಿರ್ಮಾಣವಾಗುತ್ತಿರುವ ಸರ್ದಾರ್ ಪಟೆಲ್ ಅವರ ಏಕತೆಯ ಪ್ರತಿಮೆಯ ಹಿಂದೆ ಮೇಡ್ ಇನ್ ಚೀನಾ ಎಂದು ಬರೆಯಲಾಗಿದೆ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

Published On :
ನವದೆಹಲಿ: ಗುಜರಾತ್ ನ ನರ್ಮದಾ ನದಿ ತೀರದಲ್ಲಿ ನಿರ್ಮಾಣವಾಗುತ್ತಿರುವ ಸರ್ದಾರ್ ಪಟೆಲ್ ಅವರ ಏಕತೆಯ ಪ್ರತಿಮೆಯ ಹಿಂದೆ ಮೇಡ್ ಇನ್ ಚೀನಾ ಎಂದು ಬರೆಯಲಾಗಿದೆ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಮೋದಿ ತಿರುಗೇಟು ನೀಡಿದ್ದಾರೆ.
"ಕಳೆದ 70 ವರ್ಷಗಳ ತನ್ನ ಆಡಳಿತಾವಧಿಯಲ್ಲಿ ಕಾಂಗ್ರೆಸ್ ಸರ್ದಾರ್ ಪಟೇಲರನ್ನು ಗೌರವಿಸಿಲ್ಲ. ಈಗ ಪಟೇಲರ ಪರಂಪರೆಯ ಮೇಲೆ ಹಕ್ಕು ಪ್ರತಿಪಾದನೆ ಮಾಡಲು ಕಾಂಗ್ರೆಸ್ ಕೆಳದರ್ಜೆ ರಾಜಕೀಯ ಮಾಡುತ್ತಿದೆ" ಎಂದು ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುಜರಾತ್ ನಲ್ಲಿ ನಿರ್ಮಾಣವಾಗುತ್ತಿರುವ ಪಟೆಲರ್ ಅವರ ಬೃಹತ್ ಪ್ರತಿಮೆ ಮೇಡ್ ಇನ್ ಚೀನಾ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮೋದಿ, ಉಕ್ಕಿನ ಮನುಷ್ಯ ಎಂಬ ಬಿರುದು ಹೊಂಡಿದ್ದ ಪಟೇಲ್ ಅವರೆಡೆಗೆ ಕಾಂಗ್ರೆಸ್ ಹಾಗೂ ಎಐಸಿಸಿ ಅಧ್ಯಕ್ಷರು ಹಗೆತನ ಹೊಂದಿದ್ದಾರೆ. ಸರ್ದಾರ್ ಪಟೆಲರ ವಿಷಯವನ್ನು ರಾಜಕೀಯ ಕೆಸೆರೆರೆಚಾಟಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಚತ್ತೀಸ್ ಗಢದ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಮೋದಿ, ಸರ್ದಾರ್ ಪಟೇಲರನ್ನು ಕಾಂಗ್ರೆಸ್ ನವರು ಚೀನಾ ಉತ್ಪಾದಿತ ಶೂ ಮತ್ತು ಶರ್ಟ್ ಗಳಿಗೆ ಹೋಲಿಕೆ ಮಾಡುತ್ತಿದ್ದು, ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.
"ಪ್ರಧಾನಿ ಮೋದಿ ಅವರು ಗುಜರಾತ್ ನಲ್ಲಿ ಸರ್ದಾರ್ ಪಟೆಲ್ ಅವರ ಬೃಹತ್ ಪ್ರತಿಮೆಯನ್ನು ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ನಂತರ ತಿಳಿದಿದ್ದೇನೆಂದರೆ ಅದರ ಮೇಲೆ ಮೇಡ್ ಇನ್ ಚೀನಾ ಎಂದು ಬರೆದಿತ್ತು, ಇದು ಸರ್ದಾರ್ ಪಟೇಲರಿಗೆ ಮಾಡಿರುವ ಅವಮಾನ ಎಂದು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ನರ್ಮದಾ ನದಿಯ ತೀರದಲ್ಲಿ ನಿರ್ಮಾಣವಾಗುತ್ತಿರುವ ಸರ್ದಾ ಪಟೇಲ್ ಅವರ ಏಕತೆಯ ಪ್ರತಿಮೆ ಕಾಮಗಾರಿ ಪೂರ್ಣಗೊಂಡಿದ್ದು ಅ.31 ರಂದು ಲೋಕಾರ್ಪಣೆಗೆ ಸಿದ್ಧವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್PM Narendra Modiಪ್ರಧಾನಿ ನರೇಂದ್ರ ಮೋದಿಪ್ರತಿಮೆSardar PatelChinese Shirtsಸರ್ದಾರ್ ಪಟೆಲ್ಚೀನಾ ಶರ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


