ಜಮ್ಮು ಮತ್ತು ಕಾಶ್ಮೀರ: 7 ಎಕೆ47 ರೈಫಲ್ ಗಳೊಂದಿಗೆ ಎಸ್ ಪಿಒ ಅಧಿಕಾರಿ ನಾಪತ್ತೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಅಚ್ಚರಿ ಬೆಳವಣಿಗೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು 7 ಎಕೆ 47 ರೈಫಲ್ ಗಳೊಂದಿಗ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಅಚ್ಚರಿ ಬೆಳವಣಿಗೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು 7 ಎಕೆ 47 ರೈಫಲ್ ಗಳೊಂದಿಗ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿರುವ ಎಸ್ ಪಿಎ ಕ್ಯಾಂಪ್ ನಿಂದಲೇ 7 ರೈಫಲ್ ಗಳು ಮತ್ತು ಒಂದು ಪಿಸ್ತೂಲ್ ಅನ್ನು ಕದ್ದು ಅಧಿಕಾರಿ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಅಧಿಕಾರಿಯನ್ನು ಎಸ್ ಪಿಒ ಅಧಿಕಾರಿ ಅದಿಲ್ ಬಷೀರ್ ಎಂದು ಗುರುತಿಸಲಾಗಿದೆ. ಅಂತೆಯೇ ಈತ ಸ್ಥಳೀಯ ಉಗ್ರ ಸಂಘಟನೆಗಳೊಂದಿಗೆ ಕೈ ಜೋಡಿಸಿರುವ ಶಂಕೆ ಇದ್ದು, ಇದೀಗ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಂತೆಯೇ ರಾಜ್ಯ ಶಸ್ತ್ರಾಸ್ತ್ರ ಸಂಗ್ರಹಾಗಾರಗಳಿಗೆ ಭದ್ರತೆ ಇಮ್ಮಡಿಗೊಳಿಸಲಾಗಿದೆ. ಅಲ್ಲದೆ ನಾಪತ್ತೆಯಾಗಿರುವ ಅಧಿಕಾರಿಗಾಗಿ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ನಾಪತ್ತೆಯಾದ ಅಧಿಕಾರಿ ಕುರಿತು ಮಾಹಿತಿ ನೀಡಿದವರಿಗೆ 2 ಲಕ್ಷ ನಗದು ಬಹುಮಾನ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಉಗ್ರರ ಬೆದರಿಕೆಗೆ ಹೆದರಿ ಕಣಿವೆ ರಾಜ್ಯದ ಸುಮಾರು 40 ಮಂದಿ ಎಸ್ ಪಿಒ ಅಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುಶ್ರೀನಗರSrinagarterroristsಜಮ್ಮು ಮತ್ತು ಕಾಶ್ಮೀರJammu and KashmirAK-47ಎಕೆ 47SPO Officersಎಸ್ ಪಿಒ ಅಧಿಕಾರಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


