ಉತ್ತರ ಪ್ರದೇಶ: ಕಾರು ನಿಲ್ಲಿಸಲಿಲ್ಲ ಎಂದು ಗುಂಡು ಹಾರಿಸಿದ ಪೊಲೀಸ್ ಪೇದೆ, ಆ್ಯಪಲ್ ಉದ್ಯೋಗಿ ಸಾವು!
ಸೂಚನೆ ನೀಡಿದರೂ ಕಾರು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೇ ಪೊಲೀಸ್ ಪೇದೆಯೋರ್ವ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಪರಿಣಾಮ ಆ್ಯಪಲ್ ಸಂಸ್ಥೆಯ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Published On :
ಲಖನೌ: ಸೂಚನೆ ನೀಡಿದರೂ ಕಾರು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೇ ಪೊಲೀಸ್ ಪೇದೆಯೋರ್ವ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಪರಿಣಾಮ ಆ್ಯಪಲ್ ಸಂಸ್ಥೆಯ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶ ರಾಜಧಾನಿ ಲಖನೌನಲ್ಲಿ ಈ ಘಟನೆ ಸಂಭವಿಸಿದ್ದು, ಹತ್ಯೆಯಾದ ಯುವಕನನ್ನು ಆ್ಯಪಲ್ ಸಂಸ್ಥೆಯ ಸೇಲ್ಸ್ ಮ್ಯಾನೇಜರ್ ವಿವೇಕ್ ತಿವಾರಿ ಎಂದು ಗುರುತಿಸಲಾಗಿದೆ. ಘಟನೆ ಸಂದರ್ಭದಲ್ಲಿ ವಿವೇಕ್ ತಿವಾರಿ ತನ್ನ ಸಹೋದ್ಯೋಗಿ ಸನಾ ಖಾನ್ ಜೊತೆ ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಪೊಲೀಸರು ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದು, ಇದರಿಂದ ಹೆದರಿದ ತಿವಾರಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಅನುಮಾನಗೊಂಡು ಪೇದೆ ಪ್ರಶಾಂತ್ ಚೌದರಿ ಕಾರಿನ ಬೆನ್ನು ಹತ್ತಿದ್ದಾರೆ. ಈ ವೇಳೆ ತಿವಾರಿ ಕಾರು ಪೊಲೀಸ್ ಪೇದೆಗಳ ಬೈಕ್ ಗೆ ಢಿಕ್ಕಿ ಹೊಡಿದೆದೆ. ಬಳಿಕ ಆಕ್ರೋಶಗೊಂಡ ಪೇದೆ ಚೌದರಿ ತಿವಾರಿ ಮೇಲೆ ಗುಂಡು ಹಾರಿಸಿದ್ದು, ಗುಂಡೇಟು ತಗುಲುತ್ತಿದ್ದಂತೆಯೇ ತಿವಾರಿ ಅಂಡರ್ ಪಾಸ್ ಪಿಲ್ಲರ್ ಗೆ ಕಾರು ಢಿಕ್ಕಿ ಹೊಡೆದಿದ್ದಾರೆ.
ಈ ವೇಳೆ ತಿವಾರಿಗೆ ಗಂಭೀರ ಗಾಯವಾಗಿದ್ದು ಕೂಡಲೇ ಯುವಕನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನು ಘಟನೆ ಸಂಬಂಧ ತಿವಾರಿ ಸಹೋದ್ಯೋಗಿ ಸನಾ ಖಾನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ಆಕೆ ನೀಡಿದ ದೂರಿನ ಮೇರೆಗೆ ಪೇದೆ ಪ್ರಶಾಂತ್ ಚೌದರಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ತಮ್ಮ ಪತಿಯ ಮೇಲೆ ಪೊಲೀಸರ ಗುಂಡಿನ ದಾಳಿ ಬಗ್ಗೆ ಮಾತನಾಡಿರುವ ತಿವಾರಿ ಪತ್ನಿ ಕಲ್ಪನಾ ತಿವಾರಿ ಅವರು, ನನ್ನ ಗಂಡ ಉಗ್ರಗಾಮಿಯಲ್ಲ. ಆತನ ಮೇಲೆ ಗುಂಡು ಹಾರಿಸುವ ಹಕ್ಕು ಪೊಲೀಸರಿಗೆ ಇಲ್ಲ. ಪ್ರಕರಣ ಸಂಬಂಧ ಸಿಎಂ ಯೋಗಿ ಆದಿತ್ಯಾನಾಥ್ ಅವರು ಮಧ್ಯ ಪ್ರವೇಶ ಮಾಡಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಗುಂಡಿನ ದಾಳಿUttar pradeshಲಖನೌLucknowಸಿಎಂ ಯೋಗಿ ಆದಿತ್ಯಾನಾಥ್CM Yogi AdithyanathUP policeGun ShotApple Employee Deadಉತ್ತರ ಪುದೇಶಆ್ಯಪಲ್ ಉದ್ಯೋಗಿ ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


