ಬಿಜೆಪಿ ಹಿಂದೂಗಳನ್ನೂ ರಕ್ಷಿಸುವುದಿಲ್ಲ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಲಖನೌ ನಲ್ಲಿ ನಡೆದ ಆಪಲ್ ಸಂಸ್ಥೆಯ ನೌಕರನ ಹತ್ಯೆ ಪ್ರಕರಣದ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಹಿಂದೂಗಳನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ.

Published On :
ನವದೆಹಲಿ: ಲಖನೌ ನಲ್ಲಿ ನಡೆದ ಆಪಲ್ ಸಂಸ್ಥೆಯ ನೌಕರನ ಹತ್ಯೆ ಪ್ರಕರಣದ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಹಿಂದೂಗಳನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ.
ಕಾರು ನಿಲ್ಲಿಸಲಿಲ್ಲವೆಂಬ ಕಾರಣಕ್ಕೆ ಪೇದೆಯ ಗುಂಡೇಟಿಗೆ ಬಲಿಯಾದ ವಿವೇಕ್ ತಿವಾರಿ ತಿವಾರಿ ಬಗ್ಗೆ ಟ್ವಿಟರ್ ನಲ್ಲಿ ಬರೆದಿರುವ ಅರವಿಂದ್ ಕೇಜ್ರಿವಾಲ್, ಬಿಜೆಪಿ ಹಿಂದೂಗಳ ಹಿತಾಸಕ್ತಿಗಳನ್ನೂ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ.
"ಅಧಿಕಾರಕ್ಕಾಗಿ ಬಿಜೆಪಿ ನಾಯಕರು ಏನನ್ನು ಬೇಕಾದರೂ ಮಾಡುತ್ತಾರೆ. ವಿವೇಕ್ ತಿವಾರಿ ಹಿಂದೂ ಆಗಿದ್ದರೂ ಆತನನ್ನು ಹತ್ಯೆ ಮಾಡಲಾಯಿತು. ಹಿಂದೂಗಳನ್ನು ರಕ್ಷಿಸುತ್ತೇವೆ ಎಂದು ಹೇಳುವ ಬಿಜೆಪಿ, ವಿವೇಕ್ ತಿವಾರಿಯನ್ನೇಕೆ ಹತ್ಯೆ ಮಾಡಿದೆ.? ಬಿಜೆಪಿ ಹಿಂದೂಗಳ ಹಿತಬಯಸುವ ಪಕ್ಷವಲ್ಲ. ಅಧಿಕಾರ ಹಿಡಿಯಲು ಹಿಂದೂಗಳನ್ನು ಹತ್ಯೆ ಮಾಡಲು ಸಹ ಬಿಜೆಪಿ ಹಿಂಜರಿಯುವುದಿಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಕೇಜ್ರಿವಾಲ್ ಹೇಳಿಕೆಗೆ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಿಮ್ಮ ನಾಯಕನ ಸಂಕುಚಿತ ಮನಸ್ಸು ಹೇಗಿದೆ ಎಂಬುದನ್ನು ನೋಡಿ" ಎಂದು ದೆಹಲಿ ಆಪ್ ಕಾರ್ಯಕರ್ತರಿಗೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಟ್ವಿಟರ್ ನಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


