ಮನೆಗೆಲಸದವಳ ಮೇಲೆ ಅತ್ಯಾಚಾರ; ಸೇನಾ ಮೇಜರ್ ವಿರುದ್ಧ ಎಫ್ಐಆರ್!
ಮನೆಗೆಲಸದಳವ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಭಾರತೀಯ ಸೇನಾ ಮೇಜರ್ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ...

Published On :
ನವದೆಹಲಿ: ಮನೆಗೆಲಸದಳವ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಭಾರತೀಯ ಸೇನಾ ಮೇಜರ್ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಭಾರತೀಯ ಸೇನೆಯಲ್ಲಿ ಮೇಜರ್ ಒಬ್ಬರ ಮನೆಯಲ್ಲಿ ಸಂತ್ರಸ್ತ ಮಹಿಳೆ ಹಾಗೂ ಪತಿ ಮನೆಗೆಲಸ ಮಾಡುತ್ತಿದ್ದರು. ಜುಲೈ 12ರಂದು ಸಂತ್ರಸ್ತ ಮಹಿಳೆಯ ಪತಿಯನ್ನು ಮಾರುಕಟ್ಟೆಗೆ ಕಳುಹಿಸಿದ್ದು ನಂತರ ಮಹಿಳೆಗೆ ಮೇಜರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾಗ ಪತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
ನಂತರ ಮಹಿಳೆಯ ಪತಿಯ ಶವ ಕ್ವಾಟರ್ಸ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇನ್ನು ನನ್ನ ಪತಿಯ ಸಾವು ಅನುಮಾನಾಸ್ಪದವಾಗಿದೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದರು.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಿಆರ್ಪಿಸಿ ಸೆಕ್ಷನ್ 156(3) ಅಡಿಯಲ್ಲಿ ಸೆಪ್ಟೆಂಬರ್ 25ರಂದು 376/354/506/324 ಮತ್ತು 34ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


