ದೇಶ

ವಿವಿಐಪಿ ಚಾಪರ್ ಹಗರಣ: ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

ಅಗಾಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಆರೋಪಿ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಜಾರಿ ನಿರ್ದೇಶನಾಲಯವು ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯದಲ್ಲಿ ಗುರುವಾರ ಚಾರ್ಜ್ ಶೀಟ್ ಸಲ್ಲಿಸಿದೆ.

ವಿವಿಐಪಿ ಚಾಪರ್ ಹಗರಣ: ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ
ಕ್ರಿಶ್ಚಿಯನ್ ಮೈಕೆಲ್
Published On :
ನವದೆಹಲಿ: ಅಗಾಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಆರೋಪಿ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ  ಜಾರಿ ನಿರ್ದೇಶನಾಲಯವು ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯದಲ್ಲಿ ಗುರುವಾರ ಚಾರ್ಜ್ ಶೀಟ್ ಸಲ್ಲಿಸಿದೆ.
ವಿಶೇಷ ಸಿಬಿಐ ನ್ಯಾಯಾಧೀಶ ಅರವಿಂದ್ ಕುಮಾರ್ ಎದುರು ಸಲ್ಲಿಸಲಾದ  2000 ಕ್ಕಿಂತ ಹೆಚ್ಚು ಪುಟಗಳ ಪೂರಕ ಚಾರ್ಜ್ ಶೀಟ್ ನಲ್ಲಿ ಸಂಸ್ಥೆಯು ಮೈಕೆಲ್ ನ ಹೇಳಿಕೆಗಳ ದಾಖಲೆಗಳನ್ನು ಸೇರಿಸಿದೆ.
ಇದಲ್ಲದೆ ಪ್ರಕರಣದಲ್ಲಿ ಕೆಲವು ಹೊಸ ಸಂಸ್ಥೆಗಳು, ಹೊಸ ವ್ಯಕ್ತಿಗಳು ಸಹ ಆರೋಪಿಗಳಾಗಿದ್ದಾರೆ ಎಂದು ಸಂಸ್ಥೆ ವಿವರಿಸಿದೆ. ಕ್ರಿಶ್ಚಿಯನ್ ಮೈಕೆಲ್ ನ ಸಂಸ್ಥೆಗಳ ಸಹ ಪಾಲುದಾರ, ಅವನ ಸ್ನೇಹಿತ ಡೇವಿಡ್ ಸೈಮ್ಸ್ ಹೆಸರನ್ನು ಚಾರ್ಜ್ ಶೀಟ್ ನಲ್ಲಿನ ಆರೋಪಿ ಪಟ್ಟಿಯಲ್ಲಿ ಸೇರಿಸಲಾಗಿದೆ.
ಕಳೆದ ಡಿಸೆಂಬರ್ ನಲ್ಲಿ ಯುಎಇ ನಿಂದ ಭಾರತಕ್ಕೆ ಹಸ್ತಾಂತರಗೊಂಡ ಮೈಕೆಲ್ ಪ್ರಸ್ತುತ ತಿಹಾರ್ ಜೈಲಿನಲ್ಲಿ ಸಿಬಿಐ ವಶದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.