ಚುನಾವಣಾ ಆಯೋಗದ ಭರ್ಜರಿ ಬೇಟೆ: 1,460 ಕೋಟಿ ಮೌಲ್ಯದ ಹಣ, ಮದ್ಯ, ಮಾದಕ ವಸ್ತು ವಶಕ್ಕೆ!
ಲೋಕಸಭಾ ಚುನಾವಣೆ ನಿಮಿತ್ತ ರಾಜಕೀಯ ನಾಯಕರ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಭರ್ಜರಿ ಬೇಟೆಯಾಡಿದ್ದು, ಈ ವರೆಗೂ ಬರೊಬ್ಬರಿ 1460 ಕೋಟಿ ಮೌಲ್ಯದ ಹಣ, ಮದ್ಯ ಮತ್ತು ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದೆ.

Published On :
ನವದೆಹಲಿ: ಲೋಕಸಭಾ ಚುನಾವಣೆ ನಿಮಿತ್ತ ರಾಜಕೀಯ ನಾಯಕರ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಭರ್ಜರಿ ಬೇಟೆಯಾಡಿದ್ದು, ಈ ವರೆಗೂ ಬರೊಬ್ಬರಿ 1460 ಕೋಟಿ ಮೌಲ್ಯದ ಹಣ, ಮದ್ಯ ಮತ್ತು ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದೆ.
ಈ ಬಗ್ಗೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಈ ವರೆಗೂ ಆಯೋಗದ ಅಧಿಕಾರಿಗಳು ದೇಶಾದ್ಯಂತ ಬರೊಬ್ಬರಿ 1460 ಕೋಟಿ ಮೌಲ್ಯದ ಹಣ, ಮದ್ಯ ಮತ್ತು ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಪೈಕಿ ಮತದಾರರಿಗೆ ಹಂಚಲು ಮತ್ತು ಇತರೆ ಕಾರ್ಯಗಳಿಗಾಗಿ ಅಕ್ರಮವಾಗಿ ತರಲಾಗುತ್ತಿದ್ದ 377.511 ಕೋಟಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಸುಮಾರು 157 ಕೋಟಿ ಮೌಲ್ಯದ ಮದ್ಯ, 705 ಕೋಟಿ ಮೌಲ್ಯದ ಮಾದಕ ವಸ್ತುಗಳು, 312 ಕೋಟಿ ಮೌಲ್ಯದ ಅಮೂಲ್ಯ ಲೋಹದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದು ಈ ವರೆಗಿನ ದಾಳಿ ವರದಿಯಾಗಿದ್ದು, ಈ ಪ್ರಮಾಣ ಮತ್ತಷ್ಟು ಏರಿಕೆಯಾಗಿರುವ ಸಾಧ್ಯತೆಗಳಿವೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiElection Commissionಚುನಾವಣಾ ಆಯೋಗCashಮಾದಕ ವಸ್ತುಹಣdrugsಮದ್ಯliquorಲೋಕಸಭಾ ಚುನಾವಣೆ 2019Loksabha Election 2019
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


