ಪ್ರಧಾನಿ ನರೇಂದ್ರ ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿ
ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ) ಭಾರತದ ಪ್ರಧಾನಿ ನರೇಂದ್ರ ಮೋದಿಗೆ ದೇಶದ ಅತ್ಯುನ್ನತ ಪ್ರಶಸ್ತಿ ನೀಡಿದೆ.

Published On :
ಅಬುಧಾಬಿ: ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ) ಭಾರತದ ಪ್ರಧಾನಿ ನರೇಂದ್ರ ಮೋದಿಗೆ ದೇಶದ ಅತ್ಯುನ್ನತ ಪ್ರಶಸ್ತಿ ನೀಡಿದೆ.
ಯುಎಇ ರಾಷ್ಟ್ರಪತಿ ಖಲೀಫಾ ಝಾಯಿದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು ಪ್ರಧಾನಿ ಮೋದಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಘೋಷಿಸಿದ್ದಾರೆ. ಎರಡು ದೇಶಗಳ ನಡುವಿನ ಸಂಬಂಧಗಳ ಸುಧಾರಣೆಗೆ ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪ್ರಶಸ್ತಿ ಎಂದು ಟ್ವೀಟ್ ಮಾಡಿದ್ದಾರೆ.
ಎರಡು ದೇಶಗಳ ಮಧ್ಯೆ ಐತಿಹಾಸಿಕ ಹಾಗೂ ವಿಸ್ತಾರವಾದ ರಣನೀತಿಗೆ ಸಂಬಂಧಿಸಿದ ಒಪ್ಪಂದಗಳ ಮೂಲಕ ಮತ್ತೊಮ್ಮೆ ಸಂಬಂಧಗಳ ವೃದ್ಧಿಸುವಲ್ಲಿ ಪ್ರಧಾನಿ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಯುಎಇ ಹೇಳಿದೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (2007), ಚೀನಾದ ಪ್ರಧಾನಿ ಕ್ಸಿ ಜಿನ್‍ಪಿಂಗ್ (2018), ರಾಣಿ ಎಲಿಜಬೆತ್ (2010) ಹಾಗೂ ಸೌದಿ ಅರೆಬಿಯಾದ ರಾಜ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ (2016) ಅವರಿಗೆ ಈ ಹಿಂದೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


