ಯುಗಾದಿಯಂದೆ ಉಗ್ರರ ಬಲಿ: 2 ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಯೋಧರು!
ಜಮ್ಮು ಮತ್ತು ಕಾಶ್ಮೀರದ ಸೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

Published On :
ಜಮ್ಮು ಮತ್ತು ಕಾಶ್ಮೀರದ ಸೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಸೋಫಿಯಾನ್ ನ ಇಮಾಮ್ ಸಾಹಿಬ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಸಿಕ್ಕ ಕೂಡಲೇ ಭದ್ರತಾ ಪಡೆಗಳು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು.
ಕೂಡಲೇ ಎಚ್ಚೇತ್ತ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಮೃತ ಉಗ್ರರು ಯಾವ ಸಂಘಟನೆಗೆ ಸೇರಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ. ಸದ್ಯ ಉಗ್ರರು ಬಳಸುತ್ತಿದ್ದ ಗನ್ ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


