ಕಾಶ್ಮೀರದಲ್ಲಿ ಉಗ್ರ ದಾಳಿ: ಆರ್ ಎಸ್ಎಸ್ ಮುಖಂಡ, ಅಂಗರಕ್ಷಕ ಸಾವು
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ ಎಸ್) ನಾಯಕ ಚಂದ್ರಕಾಂತ್ ಶರ್ಮಾ ಹಾಗೂ ಅವರ...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ ಎಸ್) ನಾಯಕ ಚಂದ್ರಕಾಂತ್ ಶರ್ಮಾ ಹಾಗೂ ಅವರ ವೈಯಕ್ತಿಕ ಅಂಗರಕ್ಷಕನನ್ನು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಇಂದು ಸ್ಥಳೀಯ ಆರ್ ಎಸ್ ಎಸ್ ಶಾಖೆಯ ನಾಯಕರಾದ ಚಂದ್ರಕಾತ್ ಶರ್ಮಾ ಹಾಗೂ ಅವರ ಅಂಗರಕ್ಷಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಅಂಗರಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿಶ್ತ್ವಾರ್ ಜಿಲ್ಲಾಸ್ಪತ್ರೆಗೆ ನುಗ್ಗಿದ ಉಗ್ರರು, ವೈದ್ಯಕೀಯ ಅಧೀಕ್ಷರಾಗಿದ್ದ ಚಂದ್ರಕಾಂತ್ ಹಾಗೂ ಅವರ ಅಂಗರಕ್ಷಕನ ಮೇಲೆ ಗುಂಡು ಹಾರಿಸಿದ್ದಾರೆ.
ಘಟನೆ ಬಳಿಕ ಸ್ಥಳದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ದಾಳಿ ನಡೆಸಿದವರ ಪತ್ತೆಗಾಗಿ ರಕ್ಷಣಾ ಪಡೆ ತೀವ್ರ ಶೋಧ ಕಾರ್ಯಾ ಆರಂಭಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


