ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸ: ಐಇಡಿ ಸ್ಫೋಟದಲ್ಲಿ ಬಿಜೆಪಿ ಶಾಸಕ, ಐವರು ಪೊಲೀಸರು ಸಾವು
ಲೋಕಸಭೆ ಚುನಾವಣೆಗೆ ಕೇವಲ ಎರಡು ದಿನ ಬಾಕಿ ಇರುವಾಗಲೇ ಛತ್ತೀಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಐಇಡಿ ಸ್ಫೋಟಿಸಿ ಬಿಜೆಪಿ ಶಾಸಕ....

Published On :
ರಾಯ್ಪುರ: ಲೋಕಸಭೆ ಚುನಾವಣೆಗೆ ಕೇವಲ ಎರಡು ದಿನ ಬಾಕಿ ಇರುವಾಗಲೇ ಛತ್ತೀಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಐಇಡಿ ಸ್ಫೋಟಿಸಿ ಬಿಜೆಪಿ ಶಾಸಕ ಹಾಗೂ ಐವರು ಪೊಲೀಸ್ ಸಿಬ್ಬಂದಿಯನ್ನು ಬಲಿ ಪಡೆದಿದ್ದಾರೆ.
ಛತ್ತೀಸ್ ಗಢದ ನಕ್ಸಲ್ಪೀಡಿತ ದಾಂತೇವಾಡದಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದು, ದಾಳಿಯಲ್ಲಿ ಶಾಸಕ ಭೀಮಾ ಮಾಂಡವಿ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.
ನಕ್ಸಲ್ಪೀಡಿತ ಪ್ರದೇಶದಲ್ಲಿ ಬಿಗಿ ಭದ್ರತೆಯೊಂದಿಗೆ ಚುನಾವಣಾ ಪ್ರಚಾರಕ್ಕಾಗಿ ಭೀಮಾ ಮಾಂಡವಿ ತೆರಳುತ್ತಿದ್ದಾಗ, ನಕ್ಸಲರು ಸುಧಾರಿತ ಸ್ಫೋಟಕ ಬಳಸಿ ದಾಳಿ ನಡೆಸಿದ್ದಾರೆ.
ನಕ್ಸಲರು ಸುಧಾರಿತ ಸ್ಫೋಟಕ ಸಿಡಿಸುತ್ತಿದ್ದಂತೆ ಶಾಸಕ ಭೀಮಾ ಮಾಂಡವಿ ಇದ್ದ ಎಸ್ಯುವಿ ವಾಹನ ಗಾಳಿಯಲ್ಲಿ ಮೇಲೆದ್ದು, ತುಂಡು ತುಂಡಾಯಿತು ಎನ್ನಲಾಗಿದೆ.
ಘಟನೆಯಲ್ಲಿ ಶಾಸಕರು ಹಾಗೂ ಅವರ ಬೆಂಗಾವಲು ಪಡೆಯ ಐವರು ಪೊಲೀಸರು ಸ್ಥಳದಲ್ಲೇ ಹುತಾತ್ಮರಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಛತ್ತೀಸ್ಗಢದ ಡಿಜಿಪಿ ಡಿ.ಎಂ. ಆವಸ್ತಿ, ಘಟನೆಯಲ್ಲಿ ಐವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಈಗಲೂ ಅಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಹಾಗಾಗಿ ಸಾವುನೋವಿನ ಬಗ್ಗೆ ಖಚಿತ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


