ಮಹಿಳಾ ಟೆಕ್ಕಿ ಶವ ಸೂಟ್ಕೇಸ್ನಲ್ಲಿ ಪತ್ತೆ!
ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಮಹಿಳಾ ಟೆಕ್ಕಿ ಶವ ಚರಂಡಿಯ ಒಳಗೆ ಬಿಸಾಡಿದ್ದ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದೆ.

Published On :
ಹೈದರಾಬಾದ್: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಮಹಿಳಾ ಟೆಕ್ಕಿ ಶವ ಚರಂಡಿಯ ಒಳಗೆ ಬಿಸಾಡಿದ್ದ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದೆ.
ಹೈದರಾಬಾದ್ ಹೊರವಲಯದಲ್ಲಿರುವ ಸುರಾರಾಮ್ ಕಾಲೋನಿಯಲ್ಲಿ ಶವ ಪತ್ತೆಯಾಗಿದೆ. ಇಂದು ಮಂಜಾನೆ ಸ್ಥಳೀಯ ಸೂಟ್ ಕೇಸ್ ನೋಡಿದ್ದು ಅನುಮಾನ ಬಂದಿದ್ದರಿಂದ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮೃತ ಉದ್ಯೋಗಿಯನ್ನು 25 ವರ್ಷದ ಲಾವಣ್ಯ ಎಂದು ಗುರುತಿಸಲಾಗಿದ್ದು ಈಕೆ ಕೆಲ ದಿನಗಳಿಂದ ನಾಪತ್ತೆಯಾಗಿದ್ದಳು.
ಲಾವಣ್ಯಳನ್ನು ಆಕೆಯ ಪ್ರಿಯಕರ ಸಾಯಿಸಿಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಲಾವಣ್ಯಳ ಪ್ರಿಯಕರ ಸುನೀಲ್ ಮೆಕ್ಯಾನಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಕಾಲೇಜಿನಲ್ಲಿ ಆಕೆಯ ಕ್ಲಾಸ್ ಮೇಟ್ ಕೂಡ ಆಗಿದ್ದ ಆತನನ್ನು ಆಕೆ ಪ್ರೀತಿಸುತ್ತಿದ್ದಳು. ಆದರೆ ಲಾವಣ್ಯಳನ್ನು ಮದುವೆಯಾಗಲು ಮನಸಿಲ್ಲದ ಸುನೀಲ್ ಆಕೆಯನ್ನು ಸಾಯಿಸಲು ನಿರ್ಧಾರ ಮಾಡಿದ್ದ ಎನ್ನಲಾಗಿದೆ.
ಲಾವಣ್ಯ ನಾಪತ್ತೆಯಾಗಿರುವ ಬಗ್ಗೆ ಕೆಲ ದಿನಗಳ ಹಿಂದೆ ಆಕೆಯ ಕುಟುಂಬಸ್ಥರು ದೂರ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


