ನಿರ್ಮಲಾ ಸೀತಾರಾಮನ್ ಹೃದಯ ಶ್ರೀಮಂತಿಕೆ, ಸಾಮಾಜಿಕ ಜಾಲ ತಾಣದಲ್ಲಿ ಮೆಚ್ಚುಗೆ
ರಾಜಕೀಯ ಭಿನ್ನಾಭಿಪ್ರಾಯ ಮರೆತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರನ್ನು....

Published On :
ನವದೆಹಲಿ: ರಾಜಕೀಯ ಭಿನ್ನಾಭಿಪ್ರಾಯ ಮರೆತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಣೆ ಮಾಡಿರುವ ಸಂಗತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಮೆಚ್ಚಗೆ ವ್ಯಕ್ತವಾಗಿದೆ.
ಸೀತಾರಾಮನ್ ಅವರು ತಿರುವಂತಪುರ ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ ಬರುವ ಮುನ್ನ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿತರೂರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಈ ಚಿತ್ರ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ನಂತರ ಇದರ ಬಗ್ಗೆ ಬಹಳ ಮೆಚ್ಚುಗೆಯ ಮಾತುಗಳು ಕೇಳಿ ಬಂದಿವೆ.
ನಾವು ರಾಜಕೀಯ ಜೀವನದಲ್ಲಿ ಎದುರಾಳಿಗಳೇ ಹೊರತು ರಾಜಕೀಯ ವೈರಿಗಳಲ್ಲ ಮೇಲಾಗಿ ನಾನು ಆಸ್ಪತ್ರೆಗೆ ಹೋಗುವ ವಿಚಾರವನ್ನು ನಮ್ಮ ಪಕ್ಷದ ನಾಯಕರಿಗೂ ಮತ್ತು ಕಾರ್ಯಕರ್ತರು ಸೇರಿದಂತೆ ಯಾರಿಗೂ ಹೇಳಿರಲಿಲ್ಲ ಎಂದು ಅವರು ಸೀತಾರಾಮನ್ ಅವರು ಸ್ಪಷ್ಟ ಪಡಿಸಿದ್ದಾರೆ.
ನನಗೆ ವಿಷಯ ಗೊತ್ತಾಯಿತು ಮೇಲಾಗಿ ಅವರ ತಲೆಗೆ ಪೆಟ್ಟುಬಿದ್ದು, ಅನೇಕ ಕಡೆ ಹೊಲಿಗೆ ಹಾಕಲಾಗಿದೆ ಎಂಬ ವಿಚಾರ ತಿಳಿದ ನಂತರ ವಿಮಾನ ನಿಲ್ದಾಣಕ್ಕೆ ಹೋಗುವ ಮುನ್ನ, ಸೀತಾರಾಮನ್ ಅವರು ಆಸ್ಪತ್ರೆಗೆ ತೆರಳಿ ತರೂರ್ ಅವರ ಆರೋಗ್ಯ ವಿಚಾರಿಸಿದ್ದರು. ಮೇಲಾಗಿ ಇದರ ಬಗ್ಗೆ ತರೂರ್ ಸಹ ಸಚಿವರ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿ ಪಕ್ಷ ಮೀರಿ ಅವರು ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ ನಾನು ಇದಕ್ಕಾಗಿ ಅವರಿಗೆ ಅಭಾರಿಯಾಗಿದ್ದೇನೆ ಎಂಬ ಅಭಿಮಾನದ ಮಾತು ಹೇಳಿದ್ದರು.
ಇದೆಲ್ಲವೂ ಸಾಮಾಜಿಕ ಜಾಲತಾಣದಲ್ಲಿ ಬಂದ ಮೇಲೆ ಸಚಿವರ ಒಳ್ಳೆಯ ನಡವಳಿಕೆ ಬಹಳ ಅಭಿಮಾನದ ಮಾತುಗಳು ಕೇಳಿ ಬಂದಿವೆ.
ನಾನು ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ ಮೇಲಾಗಿ ಕೊನೆ ಗಳಿಗೆಯಲ್ಲಿ ನಾನು ತೆಗೆದುಕೊಂಡ ತೀರ್ಮಾನವಾಗಿತ್ತು. ಎಲ್ಲರಿಗೂ ಹೇಳಿದರೆ ಆಸ್ಪತ್ರೆಯ ಬಳಿ ಕಾರ್ಯಕರ್ತರು ಮತ್ತು ಮಾಧ್ಯಮದವರು ಗುಂಪು ಸೇರಿ ಜನಜಂಗುಳಿ ವಾತವರಣ ನಿರ್ಮಾಣವಾಗಿ ಬೇರೆಯವರಿಗೆ ಇದರಿಂದ ತೊಂದರೆಯಾಗಲಿದೆ ಎಂಬ ಕಾರಣದಿಂದ ಯಾರಿಗೂ ಹೇಳದೆ ಹೋಗಿದ್ದೆ ಎಂದು ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


