ರೋಹಿತ್ ತಿವಾರಿ ಸಾವು ಅಸ್ವಾಭಾವಿಕ: ಪೋಸ್ಟ್ ಮಾರ್ಟಂ ವರದಿ; ಕೊಲೆ ಪ್ರಕರಣ ದಾಖಲು
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ. ಎನ್.ಡಿ.ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಸಾವು ಅಸ್ವಾಭಾವಿಕ ಎಂದು ಮರಣೋತ್ತರ ಪರೀಕ್ಷಾ ವರದಿ...

Published On :
ನವದೆಹಲಿ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ. ಎನ್.ಡಿ.ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಸಾವು ಅಸ್ವಾಭಾವಿಕ ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೋಹಿತ್ ತಿವಾರಿ ಸಾವಿನ ಪ್ರಕರಣವನ್ನು ಕ್ರೈಂ ಬ್ರ್ಯಾಂಚ್‌ಗೆ ವರ್ಗಾಯಿಸಲಾಗಿದ್ದು, ದೆಹಲಿಯ ಡಿಫೆನ್ಸ್ ಕಾಲೋನಿಯಲ್ಲಿರುವ ತಿವಾರಿ ನಿವಾಸಕ್ಕೆ ಭೇಟಿ ನೀಡಿ, ಪರಿಶೀಲಿಸಲಾಗಿದೆ.
ರೋಹಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಅವರ ಮೂಗಿನಲ್ಲಿ ರಕ್ತ ಸೋರುತ್ತಿತ್ತು. ಹೀಗಾಗಿ ಪಿಲ್ಲೋದಿಂದ ಅವರನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಮಂಗಳವಾರ ರೋಹಿತ್ ತಿವಾರಿ ಅವರು ಡಿಫೆನ್ಸ್ ಕಾಲೋನಿಯ ನಿವಾಸದಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಅವರು ಪ್ರತಿಕ್ರಿಯೆ ನೀಡದ್ದನ್ನು ನೋಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
unnatural deathಮರಣೋತ್ತರ ಪರೀಕ್ಷಾ ವರದಿPostmortem reportRohit Shekhar Tiwariರೋಹಿತ್ ಶೇಖರ್ ತಿವಾರಿಅಸ್ವಾಭಾವಿಕ ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


