ಪ್ರಧಾನಿ ನರೇಂದ್ರ ಮೋದಿ ಮಾಜಿಯಾಗಲು ಕೇವಲ ಒಂದು ತಿಂಗಳು ಮಾತ್ರ ಬಾಕಿ: ಓವೈಸಿ
ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿಯಾಗಲು ಒಂದೇ ತಿಂಗಳು ಬಾಕಿ ಉಳಿದಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ...

Published On :
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿಯಾಗಲು ಒಂದೇ ತಿಂಗಳು ಬಾಕಿ ಉಳಿದಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಓವೈಸಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಭಯೋತ್ಪಾದನೆ ನಿಗ್ರಹ, ದೇಶದ ಭದ್ರತೆ ವಿಚಾರವಾಗಿ ಹೇಳಿದ್ದನ್ನೆ ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರಿಗೆ ಭೋಪಾಲ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದ್ದು ಯಾಕೆ ಎಂದು ಬಿಜೆಪಿ, ಎನ್‍ಡಿಎ ನೇತೃತ್ವದ ಸರ್ಕಾರ ಹಾಗೂ ಶಿವಸೇನೆ ಉತ್ತರಿಸಲಿ ಎಂದು ಆಗ್ರಹಿಸಿದ್ದಾರೆ.
ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದನ್ನು ಖಂಡಿಸಿದ ಓವೈಸಿ ಅವರು, ಭಯೋತ್ಪಾದನೆ ವಿರುದ್ಧ ಹೋರಾಡುವ ಪುರಾವೆ ಇದೇನಾ? ಭಯೋತ್ಪಾದನೆ ಆರೋಪ ಎದುರಿಸುತ್ತಿರುವ ಮಹಿಳೆ ಪಕ್ಷದ ಟಿಕೆಟ್ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


