ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ ನಲ್ಲಿ ಭೀಕರ ಅಪಘಾತ, 7 ಸಾವು, 34 ಮಂದಿಗೆ ಗಾಯ
ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 34 ಮಂದಿ ಗಾಯಗೊಂಡಿದ್ದಾರೆ.

Published On :
ಲಖನೌ: ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 34 ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಬಸ್ ಸರಕು ಸಾಗಣೆ ಟ್ರಕ್ ಗೆ ಢಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 7 ಮಂದಿ ಪ್ರಯಾಣಿಕರು ಸಾವನ್ನಪ್ಪಿ, 34 ಮಂದಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ ಬಸ್ ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ರತ್ರೆಗೆ ದಾಖಲು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಪಘಾತaccidentಲಖನೌLucknowAgra-Lucknow ExpresswayMainpuri Accidentಆಗ್ರಾ-ಲಖನೌ ಎಕ್ಸ್ ಪ್ರೆಸ್ಮೈನ್ ಪುರಿ ಅಪಘಾತ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


