ಕಾಂಗ್ರೆಸ್ ಬಹುಮತ ಪಡೆಯಲ್ಲ, ಮೈತ್ರಿ ಅತ್ಯವಶ್ಯಕ- ಕಮಲ್ ನಾಥ್
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

ಮಧ್ಯಪ್ರದೇಶ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.
ಬಿಜೆಪಿ ಬಹುಮತ ಪಡೆಯದಿದ್ದರೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಅದನ್ನು ಹೊರತುಪಡಿಸಿದತೆ ಮೈತ್ರಿ ರಚನೆಗೆ ಇನ್ನಿತರ ದೊಡ್ಡ ರಾಜಕೀಯ ಪಕ್ಷಗಳಿಲ್ಲ ಎಂದು ಅವರು ಹೇಳಿದ್ದಾರೆ.
ನಾವು ಉತ್ತಮವಾದ ಕೆಲಸವನ್ನೇ ಮಾಡುತ್ತಿದ್ದೇವೆ. ಆದರೆ, ಬಹುಮತ ಗಳಿಸುವಲ್ಲಿ ವಿಫಲವಾದಲ್ಲಿ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ಮೈತ್ರಿ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದಿದ್ದಾರೆ.
ಪ್ರಸ್ತುತ ಬಿಜೆಪಿ ವಿರೋಧ, ಬಿಜೆಪಿ ಪರ ಎಂಬ ಎರಡು ವಿಧಗಳಿವೆ. ಬಿಜೆಪಿ ಪರ ಸಂಖ್ಯೆ ಕಡಿಮೆ ಇದೆ . ಆದರೆ, ಬಿಜೆಪಿ ವಿರೋಧಿ ಗುಂಪು ಅದರ ರಾಜಕೀಯ ನೀತಿ ವಿರುದ್ಧವಾಗಿರುವುದಾಗಿ . ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದರೆ ರಾಹುಲ್ ಗಾಂಧಿ ಖಂಡತವಾಗಿ ಪ್ರಧಾನಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


