ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಪಿತೂರಿ ಎಂದು ಹೇಳಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ...

Published On :
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿ ಹಾಕಿಸಲು ಪಿತೂರಿ ನಡೆಸಲಾಗಿತ್ತು ಎಂದು ಆರೋಪಿಸಿರುವ ಅಡ್ವೊಕೇಟ್ ಉತ್ಸವ್ ಬೈನ್ಸ್ ಅವರಿಂದ ಸುಪ್ರೀಂ ಕೋರ್ಟ್ ಮಂಗಳವಾರ ಪ್ರತಿಕ್ರಿಯೆ ಕೇಳಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ವಕೀಲ ಉತ್ಸವ್ ಸಿಂಗ್ ಬೈನ್ಸ್ ಅವರಿಗೆ ನೊಟೀಸ್ ಜಾರಿ ಮಾಡಿದೆ. ಸುಪ್ರೀಂ ಕೋರ್ಟ್ ಮಾಜಿ ಮಹಿಳಾ ಉದ್ಯೋಗಿ ಪರವಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಆರೋಪ ಹೊರಿಸಲು ತಮಗೆ ಒಂದೂವರೆ ಕೋಟಿ ರೂಪಾಯಿ ಹಣದ ಆಮಿಷವೊಡ್ಡಲಾಗಿತ್ತು ಎಂದು ವಕೀಲ ಉತ್ಸವ್ ಸಿಂಗ್ ಬೈನ್ಸ್ ಆರೋಪ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್noticeನೊಟೀಸ್sexual harassment caseRanjan Gogoiರಂಜನ್ ಗೊಗೊಯ್ಲೈಂಗಿಕ ಕಿರುಕುಳ ಕೇಸು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


