ಅಕ್ರಮ ಗಣಿಗಾರಿಕೆ; ಎಂ.ಕೆ. ಅಳಗಿರಿ ಪುತ್ರನ 40 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಅಕ್ರಮ ಗ್ರಾನೈಟ್ ಗಣಿಗಾರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಪುತ್ರ ದಯಾನಿಧಿ ಅಳಗಿರಿಗೆ 40.34 ಕೋಟಿ ರೂ ಮೌಲ್ಯದ 25 ಸ್ಥಿರ-ಚರಾಸ್ತಿಗಳನ್ನು ಜಾರಿ

Published On :
ನವದೆಹಲಿ: ಅಕ್ರಮ ಗ್ರಾನೈಟ್ ಗಣಿಗಾರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಪುತ್ರ ದಯಾನಿಧಿ ಅಳಗಿರಿಗೆ 40.34 ಕೋಟಿ ರೂ ಮೌಲ್ಯದ 25 ಸ್ಥಿರ-ಚರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲುಹಾಕಿಕೊಂಡಿದೆ.
ಅಳಗಿರಿ ದಯಾನಿಧಿ ಹಾಗೂ ಎಸ್. ನಾಗರಾಜನ್ ಒಲಿಂಪಸ್ ಗ್ರಾನೈಟ್ಸ್ ಕಂಪನಿಯ ಪ್ರವರ್ತಕರು, ಶೇರುದಾರರು ಹಾಗೂ ನಿರ್ದೇಶಕರಾಗಿದ್ದಾರೆ ಮಧುರೈ ಒಲಿಂಪಸ್ ಕಂಪನಿ ಹಾಗೂ ಅದರ ಪ್ರವರ್ತಕರು ಹಾಗೂ ಇತರ ವ್ಯಕ್ತಿಗಳ ವಿರುದ್ಧ ತಮಿಳುನಾಡು ಪೊಲೀಸರು ದೂರು ದಾಖಲಿಸಿ, ದೋಷಾರೋಪಪಟ್ಟಿ ಸಲ್ಲಿಸಿದ ನಂತರ ಜಾರಿ ನಿರ್ದೇಶನಾಲಯ ಈ ಕ್ರಮ ಕೈಗೊಂಡಿದೆ.
ಕಂಪನಿ ಹಾಗೂ ಇತರ ವ್ಯಕ್ತಿಗಳು ಅಕ್ರಮ ಗ್ರಾನೈಟ್ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಭಾರತೀಯ ದಂಡ ಸಂಹಿತೆ ವಿವಿಧ ಕಲಂ ಹಾಗೂ ಸ್ಪೋಟಕ ವಸ್ತುಗಳ ಕಾಯ್ದೆ ಅಡಿ ವಿವಿಧ ಅಪರಾಧ ಎಸಗಲಾಗಿದೆ ಎಂದು ದೂರಲಾಗಿದೆ.
ತಮಿಳುನಾಡು ಖನಿಜ ನಿಗಮಕ್ಕೆ ಗುತ್ತಿಗೆ ನೀಡಿರುವ ಸುತ್ತಮುತ್ತಲ ಪ್ರದೇಶಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿ, ಸರ್ಕಾರ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ಕಂಪನಿಯ ನಿರ್ದೇಶಕರು, ಪ್ರವರ್ತಕರ ವಿರುದ್ದ ಅಪರಾಧಿಕ ಸಂಚು ಆರೋಪ ಹೊರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


