ಸ್ವಿಟ್ಜರ್ಲ್ಯಾಂಡ್ ನಲ್ಲಿ ಸಿಎಂ ಕಮಲ್ ನಾಥ್ ವಾಸ್ತವ್ಯಕ್ಕೆ ಮಧ್ಯಪ್ರದೇಶ ಸರ್ಕಾರದಿಂದ 1.58 ಕೋಟಿ ಖರ್ಚು!
ಸಿಟ್ಜರ್ಲ್ಯಾಂಡ್ ನಲ್ಲಿ ಸಿಎಂ ಕಮಲ್ ನಾಥ್ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ವಾಸ್ತವ್ಯಕ್ಕಾಗಿ ಮಧ್ಯಪ್ರದೇಶ ಸರ್ಕಾರದಿಂದ 1.58 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ.

Published On :
ಭೋಪಾಲ್: ಸಿಟ್ಜರ್ಲ್ಯಾಂಡ್ ನಲ್ಲಿ ಸಿಎಂ ಕಮಲ್ ನಾಥ್ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ವಾಸ್ತವ್ಯಕ್ಕಾಗಿ ಮಧ್ಯಪ್ರದೇಶ ಸರ್ಕಾರದಿಂದ 1.58 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ.
ಆರ್ ಟಿಐ ನಿಂದ ಈ ಮಾಹಿತಿ ಬಹಿರಂಗವಾಗಿದೆ. ಜನವರಿ ತಿಂಗಳಲ್ಲಿ ವರ್ಲ್ಡ್ ಎಕಾನಾಮಿಕ್ ಫೋರಂ ನಲ್ಲಿ ಭಾಗವಹಿಸಲು ಸ್ವಿಟ್ಜರ್ಲ್ಯಾಂಡ್ ನ ದಾವೋಸ್ ಗೆ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್, ರಾಜ್ಯ ಮುಖ್ಯಕಾರ್ಯದರ್ಶಿ ಎಸ್ ಆರ್ ಮೊಹಂತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಅಶೋಕ್ ಬರ್ನ್ವಾಲ್, ಕೈಗಾರಿಕಾ ನೀತಿ ಇಲಾಖೆ ಹಾಗೂ ಹೂಡಿಕೆ ಉತ್ತೇಜನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸುಲೇಮಾನ್ ತೆರಳಿದ್ದರು.
ಈ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳ ಪ್ರಯಾಣ ವೆಚ್ಚ, ವಸತಿ ಸೇರಿದಂತೆ ಒಟ್ಟಾರೆ 1.58 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂಬುದು ಆರ್ ಟಿಐ ಮೂಲಕ ಈಗ ಬಹಿರಂಗವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


