ಈಶಾನ್ಯ ರಾಜ್ಯಗಳಲ್ಲಿ ಪ್ರಬಲ ಭೂಕಂಪ; ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು
ಈಶಾನ್ಯ ಭಾರತದ ರಾಜ್ಯಗಳಲ್ಲಿ ಇಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.

Published On :
ನವದೆಹಲಿ: ಈಶಾನ್ಯ ಭಾರತದ ರಾಜ್ಯಗಳಲ್ಲಿ ಇಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.
ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ನಿನ್ನೆ ಪ್ರಬಲ ಭೂಕಂಪ ಕಂಪಿಸಿದ್ದು, ಅರುಣಾಚಲದ ಪಶ್ಚಿಮ ಸಿಯಾಂಗ್‌ನಲ್ಲಿ ರಾತ್ರಿ ಸುಮಾರು 1.30 ರ ವೇಳೆಗೆ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಕೇಂದ್ರ ಬಿಂದು ವಾಯುವ್ಯ ಭಾಗದದಲ್ಲಿ ಕೇಂದ್ರಿಕೃತವಾಗಿತ್ತು, 9 ಕಿ.ಮೀ ಆಳದಲ್ಲಿತ್ತು ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ಧಾರೆ.
ಬುಧವಾರ ಕೆಲವೆಡೆ ಭೂಮಿ ಕಂಪನವಾಗಿದ್ದು, ಚೀನಾದ ಕೆಲ ಭಾಗಗಳು, ನೇಪಾಳ, ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಂಪನ ಅನುಭವಕ್ಕೆ ಬಂದಿದೆ. ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರಾ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಣಿಪುರ ರಾಜ್ಯಗಳನ್ನು ವಿಶ್ವದ ಅತಿ ಹೆಚ್ಚು ಭೂಕಂಪನ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ. ಇದುವರೆಗೂ ಯಾವುದೇ ಹಾನಿಯ ಬಗ್ಗೆ ವಿವರಗಳು ಲಭ್ಯವಾಗಿಲ್ಲ.
ಭೂಕಂಪದ ತೀವ್ರತೆ ಕಡಿಮೆ ಇರುವುದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ಈ ವರೆಗೂ ವರದಿಯಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


