ಲಂಕಾ ಸ್ಫೋಟದಲ್ಲಿ ಮೃತಪಟ್ಟ ಭಾರತೀಯರ ಸಂಖ್ಯೆ 11 ಕ್ಕೆ ಏರಿಕೆ
ಈಸ್ಟರ್ ಭಾನುವಾರದಂದು ಶ್ರೀಲಂಕಾದಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಅಸುನೀಗಿದ ವಿದೇಶಿಗರ ಸಂಖ್ಯೆ 36 ಕ್ಕೆ ಏರಿಕೆಯಾಗಿದೆ.

Published On :
ಕೊಲಂಬೋ: ಈಸ್ಟರ್ ಭಾನುವಾರದಂದು ಶ್ರೀಲಂಕಾದಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಅಸುನೀಗಿದ ವಿದೇಶಿಗರ ಸಂಖ್ಯೆ 36 ಕ್ಕೆ ಏರಿಕೆಯಾಗಿದೆ.
ಈ ಘಟನೆಯಲ್ಲಿ ಮೃತಪಟ್ಟ ಭಾರತೀಯರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ ಎಂದು ಶ್ರೀಲಂಕಾದ ವಿದೇಶಾಂಗ ಸಚಿವಾಲಯ ಹೇಳಿದೆ. ಬಾಂಗ್ಲಾ, ಚೀನಾ, ಭಾರತ, ಡೆನ್ಮಾರ್ಕ್, ಜಪಾನ್, ನೆದರ್ಲ್ಯಾಂಡ್, ಪೋರ್ಚುಗಲ್, ಸೌದಿ ಅರೇಬಿಯಾ, ಸ್ಪೇನ್, ಟರ್ಕಿ, ಯುಕೆ, ಯುಎಸ್ಎ, ಆಸ್ಟ್ರೇಲಿಯಾದ ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ.
14 ವಿದೇಶಿಗರ ಗುರುತನ್ನು ಸರಿಯಾಗಿ ಈ ವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಅವರ ಶರೀರಗಳನ್ನು ಇನ್ನೂ ಗುರುತಿಸಲಾಗದ ಸಂತ್ರಸ್ತರ ಶವಗಳೊಂದಿಗೆ ಇರಿಸಲಾಗಿದೆ ಎಂದು ಲಂಕಾ ಸರ್ಕಾರ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


