ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ವಿಚಾರಣಾ ಸಮಿತಿಯಿಂದ ಹೊರಬಂದ ನ್ಯಾಯಮೂರ್ತಿ ಎನ್.ವಿ.ರಮಣ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಪರಿಶೀಲನೆಗಾಗಿ...

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಪರಿಶೀಲನೆಗಾಗಿ ರಚಿಸಲಾಗಿರುವ ಮೂವರು ಸದಸ್ಯರನ್ನೊಳಗೊಂಡ ವಿಚಾರಣಾ ಸಮಿತಿಯಿಂದ ನ್ಯಾಯಮೂರ್ತಿ ಎನ್. ವಿ. ರಮಣ ಹೊರಬಂದಿದ್ದಾರೆ.
ನ್ಯಾಯಮೂರ್ತಿ ಎನ್. ವಿ. ರಮಣ ಸಿಜೆಐ ನ ಆಪ್ತ ಮಿತ್ರ, ಅಷ್ಟೇ ಅಲ್ಲದೇ ಕುಟುಂಬ ಸದಸ್ಯರಿದ್ದಂತೆ. ಸಿಜೆಐ ನಿವಾಸಕ್ಕೆ ಅವರು ಆಗಾಗ್ಗೆ ಹೋಗುತ್ತಿರುತ್ತಾರೆ. ಆದ್ದರಿಂದ ನ್ಯಾಯಸಮ್ಮತವಾದ ವಿಚಾರಣೆ ನಡೆಯಬೇಕಾದರೆ ನ್ಯಾ. ಎನ್ ವಿ ರಮಣ ಅವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಸಮಿತಿ ಸದಸ್ಯರಿಗೆ ಆ ಮಹಿಳೆ ಪತ್ರ ಬರೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಸಿಜೆಐ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ನಡೆಸಲು ನ್ಯಾಯಮೂರ್ತಿ ಎಸ್ಎ ಬಾಬ್ಡೆ ನೇತೃತ್ವದಲ್ಲಿನ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ.
ಸುಪ್ರೀಂ ಕೋರ್ಟ್ ವಿಧಿಸಿರುವ ವಿಶಾಖಾ ಮಾರ್ಗಸೂಚಿಗಳ ಪ್ರಕಾರ ಇಂತಹ ಪ್ರಕರಣಗಳ ವಿಚಾರಣೆ ನಡೆಸುವಾಗ ಮಹಿಳಾ ನ್ಯಾಯಮೂರ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿರಬೇಕು, ಆದರೆ ಈ ಪ್ರಕರಣದಲ್ಲಿ ಇಂದ್ರಾ ಬ್ಯಾನರ್ಜಿ ಒಬ್ಬರೇ ಮಹಿಳಾ ನ್ಯಾಯಮೂರ್ತಿ ಇದ್ದಾರೆ ಎಂದು ನ್ಯಾಯಮೂರ್ತಿ ಎಸ್ ಎ ಬಾಬ್ಡೆ ಅವರಿಗೆ ಬರೆದಿರುವ ಪತ್ರದಲ್ಲಿ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿಜೆಐ ನಿವಾಸದಲ್ಲಿ ಕೆಲಸ ಮಾಡುವಾಗ ನ್ಯಾಯಮೂರ್ತಿ ರಮಣ ರಂಜನ್ ಗೊಗೋಯ್ ಅವರ ಕುಟುಂಬ ಸದಸ್ಯರಂತೆ ಇರುವುದನ್ನು ನಾನು ನೋಡಿದ್ದೇನೆ. ಆಗಾಗ್ಗೆ ಅವರು ಭೇಟಿ ನೀಡುತ್ತಿದ್ದರು. ಆದ್ದರಿಂದ ನನ್ನ ಅಪಿಢವಿಟ್ ಹಾಗೂ ಸಾಕ್ಷ್ಯಧಾರಗಳು ಉದ್ದೇಶಪೂರ್ವಕವಾಗಿ ಸ್ವೀಕರಿಸದೆ ಮುಕ್ತ ವಿಚಾರಣೆ ನಡೆಯಲು ಸಾಧ್ಯವಿಲ್ಲ ಎಂಬ ಆತಂಕ ಕಾಡುತ್ತಿದೆ ಎಂದು ಮಹಿಳೆ ಪತ್ರದಲ್ಲಿ ಬರೆದಿದ್ದರು ಎಂಬುದು ಮೂಲಗಳಿಂದ ತಿಳಿದುಬಂದಿದೆ.
ವಕೀಲರ ಜೊತೆಗೆ ವಿಚಾರಣೆ ಸಮಿತಿ ಮುಂದೆ ಹಾಜರಾಗಲು ತಮ್ಮಗೂ ಅವಕಾಶ ನೀಡಬೇಕು, ಸಮಿತಿಯ ನ್ಯಾಯಿಕ ಪ್ರಕ್ರಿಯೆಗಳನ್ನು ವಿಡಿಯೋ ಚಿತ್ರೀಕರಣ ಮಾಡುವುದರಿಂದ ವಿವಾದಕ್ಕೆ ಆಸ್ಪದ ವಿಲ್ಲದೆ ಪ್ರಾಮಾಣಿಕ ರೀತಿಯಲ್ಲಿ ವಿಚಾರಣೆ ನಡೆಯಲು ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಮಹಿಳೆ ಸಮಿತಿ ಮುಂದೆ ಕೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


