ಜೆಟ್ ಏರ್ ವೇಸ್ ಅಧೋಗತಿಗೆ ಜೇಟ್ಲಿ, ಸಿನ್ಹಾ ಹೊಣೆ: ಸುಬ್ರಮಣ್ಯನ್ ಸ್ವಾಮಿ ಆರೋಪ
ಜೆಟ್ ಏರ್ ವೇಸ್ ಅಧೋಗತಿಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ನಾಗರಿಕ ವಿಮಾನಯಾನ ಖಾತೆ ಸಚಿವ ಜಯಂತ್ ಸಿನ್ಹಾ ಕಾರಣರಾಗಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯನ್ ಸ್ವಾಮಿ ಆರೋಪಿಸಿದ್ದಾರೆ.

ನವದೆಹಲಿ: ಜೆಟ್ ಏರ್ ವೇಸ್ ಅಧೋಗತಿಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ನಾಗರಿಕ ವಿಮಾನಯಾನ ಖಾತೆ ಸಚಿವ ಜಯಂತ್ ಸಿನ್ಹಾ ಕಾರಣರಾಗಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯನ್ ಸ್ವಾಮಿ ಆರೋಪಿಸಿದ್ದಾರೆ.
ಜೆಟ್ ಏರ್ ವೇಸ್ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿರುವ ಸುಬ್ರಮಣ್ಯನ್ ಸ್ವಾಮಿ, ಬಿಜೆಪಿ ಘನತೆಗೆ ಹಾನಿ ಮಾಡಲು ಜೇಟ್ಲಿ ಮತ್ತು ಸಿನ್ಹಾ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸ್ಪೈಸ್ ಜೆಟ್‍ಗೆ ಅನುಕೂಲ ಮಾಡಿಕೊಡಲು ಜೆಟ್ ಏರ್ ವೇಸ್ ಅನ್ನು ಅಧೋಗತಿಗೆ ತಳ್ಳುವ ಪ್ರಯತ್ನಗಳಿಂದ ಹಿಂದೆ ಸರಿಯುವಂತೆ ಜೇಟ್ಲಿ ಮತ್ತು ಸಿನ್ಹಾ ಅವರಿಗೆ ಪ್ರಧಾನಿ ಸೂಚಿಸಬೇಕು. ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಮತ್ತೊಬ್ಬರಿಗೆ ಲಾಭ ಮಾಡಿಕೊಡಲು ಹೊರಟಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಬುಧವಾರ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿದ್ದ ಡಾ.ಸುಬ್ರಮಣ್ಯನ್ ಸ್ವಾಮಿ ಅವರು, ಈ ವಿಷಯದ ಕಡೆ ಗಮನ ಹರಿಸುವಂತೆ ಒತ್ತಾಯಿಸಿದ್ದರು.
ಜೆಟ್ ಏರ್ ವೇಸ್‍ನ ನಷ್ಟವನ್ನು ಸ್ಪೈಸ್‍ಜೆಟ್ ಮತ್ತು ವಿಸ್ತಾರ ಏರ್ ಲೈನ್ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಗಂಭೀರ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಜೆಟ್ ಏರ್ ವೇಸ್ ಅನ್ನು ಏರ್ ಇಂಡಿಯಾದೊಂದಿಗೆ ವಿಲೀನಗೊಳಿಸುವಂತೆಯೂ ಸುಬ್ರಮಣ್ಯನ್ ಸ್ವಾಮಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


