ಜಾತಿ ಹೆಸರಲ್ಲಿ ಮತ, ಜನತೆಯ ಹಣ ಲೂಟಿ, ಇದು ಉತ್ತರ ಪ್ರದೇಶದ ಮೈತ್ರಿ ಮಂತ್ರ: ಪ್ರಧಾನಿ ನರೇಂದ್ರ ಮೋದಿ
ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ರಚನೆಯಾಗಿರುವ ಎಸ್ ಪಿ-ಬಿಎಸ್ ಪಿ-ಆರ್ ಎಲ್ ಡಿ ಮೈತ್ರಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

Published On :
ಹಾರ್ದೋಯ್: ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ರಚನೆಯಾಗಿರುವ ಎಸ್ ಪಿ-ಬಿಎಸ್ ಪಿ-ಆರ್ ಎಲ್ ಡಿ ಮೈತ್ರಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಜಾತಿಯ ಹೆಸರಿನಲ್ಲಿ ಮತ ಕೇಳಿ, ಜನತೆಯ ಹಣವನ್ನು ಲೂಟಿ ಮಾಡಿ ಎಂಬುದು ಉತ್ತರ ಪ್ರದೇಶ ಮಹಾಮೈತ್ರಿಯ ಉದ್ದೇಶವಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಹಾರ್ದೋಯ್ ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಬೇಡ್ಕರ್ ನ್ನು ವಿರೋಧಿಸಿದವರ ಹೆಸರಿನಲ್ಲಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಮತಯಾಚನೆ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರ ಹೆಸರಿನಲ್ಲಿ ಮತ ಕೇಳುತ್ತಿರುವವರು ಅವರ ಜೀವನದಿಂದ ಏನನ್ನೂ ಕಲಿತಿಲ್ಲ. ಅಂಬೇಡ್ಕರ್ ಗೆ ಅವಮಾನ ಮಾಡಿದವರ ಹೆಸರಿನಲಿ ಬೆಹನ್ ಜೀ ಮತಗಳನ್ನು ಕೇಳುತ್ತಿದ್ದಾರೆ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


