ಸಂಸತ್ ಅಧಿವೇಶನದ ಬಳಿಕ ಕಾಂಗ್ರೆಸ್ ನೂತನ ಅಧ್ಯಕ್ಷರ ಬಗ್ಗೆ ನಿರ್ಧಾರ
ರಾಹುಲ್ ಗಾಂಧಿ ಅವರ ರಾಜೀನಾಮೆ ನಂತರ ಕಾಂಗ್ರೆಸ್ ಗೆ ನೂತನ ಸಾರಥಿ ಯಾರಾಗಲಿದ್ದಾರೆ ಎಂಬ ಬಹು ದಿನಗಳ ಕುತೂಹಲಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ.

Published On :
ನವದೆಹಲಿ: ರಾಹುಲ್ ಗಾಂಧಿ ಅವರ ರಾಜೀನಾಮೆ ನಂತರ ಕಾಂಗ್ರೆಸ್ ಗೆ ನೂತನ ಸಾರಥಿ ಯಾರಾಗಲಿದ್ದಾರೆ ಎಂಬ ಬಹು ದಿನಗಳ ಕುತೂಹಲಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ.
ಈ ನಡೆಯುತ್ತಿರುವ ಸಂಸತ್ ಮುಂಗಾರು ಅಧಿವೇಶನದ ಬಳಿಕ ಎಐಸಿಸಿ ನೂತನ ಅಧ್ಯಕ್ಷರ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಅವರು ಹೇಳಿದ್ದಾರೆ.
ಇಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿಗ ಸುರ್ಜೇವಾಲ, ಸಂಸತ್ ಅಧಿವೇಶನದ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಂಸತ್ ಅಧಿವೇಶನವನ್ನು ಆಗಸ್ಟ್ 7ರ ವರೆಗೆ ವಿಸ್ತರಿಸಲಾಗಿದ್ದು, ಅಧಿವೇಶನದ ಬಳಿಕ ನಡೆಯುವ ಸಿಡಬ್ಲ್ಯುಸಿ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸಹ ಭಾಗವಹಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


