ಚುನಾವಣೆಗೆ ಮುನ್ನ 'ಪವರ್' ಪ್ಲಾನ್ ಮಾಡಿದ ಕೇಜ್ರಿವಾಲ್: 200 ಯೂನಿಟ್ ವರೆಗೆ ಉಚಿತ ವಿದ್ಯುತ್!
200 ಅಥವಾ ಅದಕ್ಕಿಂತ ಕಡಿಮೆ ಯುನಿಟ್ ಬಳಸುವ ಎಲ್ಲಾ ಕುಟುಂಬಗಳಿಗೆ ಉಚಿತ ವಿದ್ಯುತ್ ಒದಗಿಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

Published On :
ನವದೆಹಲಿ: 200 ಅಥವಾ ಅದಕ್ಕಿಂತ ಕಡಿಮೆ ಯುನಿಟ್ ಬಳಸುವ ಎಲ್ಲಾ ಕುಟುಂಬಗಳಿಗೆ ಉಚಿತ ವಿದ್ಯುತ್ ಒದಗಿಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಅಲ್ಲದೆ 201 ರಿಂದ 400 ಯುನಿಟ್ ವಿದ್ಯುತ್ ಬಳಸುವವರಿಗೆ ಶೇ 50 ರಷ್ಟು ಸಹಾಯಧನ ನೀಡುವುದಾಗಿಯೂ ಹೇಳಿದ್ದಾರೆ.
ವಿದ್ಯುತ್ ಕಂಪನಿಗಳು ಉತ್ತಮ ಆರ್ಥಿಕ ಸ್ಥಿತಿ ಹೊಂದಿರುವುದರಿಂದ ಮತ್ತು ಮೂಲಸೌಕರ್ಯಗಳು ಸುಧಾರಿಸಿರುವುದರಿಂದ ವಿದ್ಯುತ್ ದರದಲ್ಲಿ ಇಳಿಕೆ ಕಂಡುಬಂದಿದೆ ಎಂದು ಕೇಜ್ರಿವಾಲ್ ಹೇಳಿದರು. "ದೆಹಲಿಯು ಭಾರತದಲ್ಲಿ ಅಗ್ಗದ ವಿದ್ಯುತ್ ಪಡೆಯುತ್ತದೆ. ದೆಹಲಿಯ ಜನರಿಗೆ 24 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ" ಎಂದು ಅವರು ಹೇಳಿದರು.
ದೆಹಲಿ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆಗಳು ನಡೆಯಲಿದೆ.. ಈ ವರ್ಷದ ಆರಂಭದಲ್ಲಿ ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಜತೆಗೆ ಕೈಜೋಡಿಸುವ ಇರಾದೆ ಹೊಂದಿದ್ದ ಕೇಜ್ರಿವಾಲ್ ಕಡೆ ಗಳಿಗೆಯಲ್ಲಿ ದೇಶದಾದ್ಯಂತ ಯವ ರಾಜಕೀಯ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಲದಿರಲು ತೀರ್ಮಾನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


