ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಬಂಧನ
ಪ್ರಮುಖ ಬೆಳವಣಿಗೆಯಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಉಗ್ರನೋರ್ವನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Published On :
ಶ್ರೀನಗರ: ಪ್ರಮುಖ ಬೆಳವಣಿಗೆಯಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಉಗ್ರನೋರ್ವನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಬದಗಾಮ್ ನಲ್ಲಿ ಅವಿತು ದಾಳಿಗೆ ಸಂಚು ರೂಪಿಸುತ್ತಿದ್ದ ಆರೋಪದ ಮೇರೆಗೆ ಕುಲ್ಗಾಮ್ ಜಿಲ್ಲೆಯ ವಾರ್ಪೋರಾ ಪ್ರದೇಶದ ನಿವಾಸಿ ಶೌಕತ್ ಅಹ್ಮದ್ ತಂತ್ರಿ ಎಂಬಾತನನ್ನು ಬಂಧಿಸಲಾಗಿದೆ. ಕೇಂದ್ರ ಕಾಶ್ಮೀರದ ಖಾಜಿಪೋರಾ ಪ್ರಾಂತ್ಯದಲ್ಲಿ ಕಾರ್ಯಾಚರಣೆ ನಡೆಸಿದ ಸೇನೆ ಶೌಕತ್ ಅಹ್ಮದ್ ತಂತ್ರಿಯನ್ನು ಬಂಧಿಸಿದೆ. ಅಲ್ಲದೆ ಆತನಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಕಾಶ್ಮೀರದ ಚಡೂರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ದೂರು ದಾಖಲಾಗಿದ್ದು ತನಿಖೆ ಆರಂಭಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆHizbul Mujahideenಹಿಜ್ಬುಲ್ ಮುಜಾಹಿದ್ದೀನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


