ಹಿರಿಯ ಪತ್ರಕರ್ತ ರವೀಶ್ ಕುಮಾರ್ ಗೆ 2019ನೇ ಸಾಲಿನ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ
ಪ್ರಸಕ್ತ ವರ್ಷದ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರಿಗೆ ಲಭಿಸಿದೆ...

Published On :
ಮಣಿಲಾ: ಪ್ರಸಕ್ತ ವರ್ಷದ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರಿಗೆ ಲಭಿಸಿದೆ. ಇದೇ ತಿಂಗಳ 31ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
44 ವರ್ಷದ ರವೀಶ್ ಕುಮಾರ್ ಎನ್ ಡಿಟಿವಿ ಇಂಡಿಯಾ ಸುದ್ದಿವಾಹಿನಿಯ ಹಿರಿಯ ಕಾರ್ಯಕಾರಿ ಸಂಪಾದಕರಾಗಿದ್ದು ಭಾರತದ ಅತ್ಯಂತ ಪ್ರಭಾವಿ ಟಿವಿಪತ್ರಕರ್ತರಲ್ಲೊಬ್ಬರಾಗಿದ್ದಾರೆ ಎಂದು ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಫೌಂಡೇಶನ್ ತಿಳಿಸಿದೆ.
ಏಷ್ಯಾ ಖಂಡದಲ್ಲಿ ಯಾವುದೇ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದವರನ್ನು ಗುರುತಿಸಿ ನೀಡಲಾಗುವ ಅತ್ಯುನ್ನತ ನಾಗರಿಕ ಗೌರವ ಇದಾಗಿದ್ದು ಏಷ್ಯಾ ಖಂಡದ ನೊಬೆಲ್ ಪ್ರಶಸ್ತಿ ಎಂದೇ ಇದನ್ನು ಪರಿಗಣಿಸಲಾಗುತ್ತದೆ. ಈ ವರ್ಷ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದೆ.
ಬಿಹಾರ ರಾಜ್ಯದ ಜಿತ್ವಾರ್ಪುರ್ ಗ್ರಾಮದಲ್ಲಿ ಜನಿಸಿದ ರವೀಶ್ ಕುಮಾರ್ 1996ರಲ್ಲಿ ಎನ್ ಡಿಟಿವಿ ಸಂಸ್ಥೆಗೆ ಸೇರಿದ್ದರು. ಜಿಲ್ಲಾ ವರದಿಗಾರ ಹುದ್ದೆಯಿಂದ ಇಂದು ಕಾರ್ಯಕಾರಿ ಸಂಪಾದಕರವರೆಗೆ ಬೆಳೆದಿದ್ದಾರೆ. ನಂತರದ ದಿನಗಳಲ್ಲಿ ಎನ್ ಡಿಟಿವಿ 24 ಗಂಟೆಗಳ ಹಿಂದಿ ಸುದ್ದಿ ವಾಹಿನಿಯಾದ ಎನ್ ಡಿಟಿವಿ ಇಂಡಿಯಾವನ್ನು ಆರಂಭಿಸಿತು. ಹಿಂದಿ ಭಾಷಿಕರಿಗೆ ಅಚ್ಚುಮೆಚ್ಚಾಗಿ ಬೆಳೆದ ಸುದ್ದಿವಾಹಿನಿಯಲ್ಲಿ ರವೀಶ್ ಕುಮಾರ್ ಅವರ ಪ್ರೈಮ್ ಟೈಮ್ ಶೋ ಜನಪ್ರಿಯ.
2019ನೇ ಸಾಲಿನ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಮ್ಯಾನ್ಮಾರ್ ನ ಕೊ ಸ್ವೆ ವಿನ್, ಥೈಲ್ಯಾಂಡ್ ನ ಅಂಘಾನ ನೀಲಾಪೈಜಿತ್, ಫಿಲಿಪೈನ್ಸ್‌ನ ರೇಮುಂಡೋ ಪೂಜಂಟೆ ಕಯಾಬ್ಯಾಬ್ ಮತ್ತು ದಕ್ಷಿಣ ಕೊರಿಯಾದ ಕಿಮ್ ಜೊಂಗ್-ಕಿ ಕೂಡ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


