ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಐಇಡಿ ಬಾಂಬ್ ಸ್ಫೋಟ, ಸೇನಾ ವಾಹನ ಜಖಂ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದು, ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ್ದಾರೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದು, ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಜಾಹಿದ್‌ಬಾಗ್ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಭಯೋತ್ಪಾದಕರು ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಐಇಡಿ ಬಾಂಬ್ ಸ್ಫೋಟಿಸಿದ್ದಾರೆ. ಮೂಲಗಳ ಪ್ರಕಾರ ಇದೇ ವಾಹನದಲ್ಲಿ 55 ರಾಷ್ಟ್ರೀಯ ರೈಫಲ್ಸ್ ಸೈನಿಕರು ಸಂಚರಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸ್ಫೋಟದ ತೀವ್ರತೆಗೆ ಸೇನಾವಾಹನ ಜಖಂಗೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ದಾಳಿಯ ಬಳಿಕ, ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭಿಸಿವೆ. ಫೆಬ್ರವರಿ 14 ರಂದು ಜಿಲ್ಲೆಯ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ್ದ ಭೀಕರ ಬಾಂಬ್ ದಾಳಿಯಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and KashmirIED blastterrorists Attackಭಯೋತ್ಪಾದಕರ ದಾಳಿPulwamaಪುಲ್ವಾಮಾಐಇಡಿ ಸ್ಫೋಟArmy Vehicleಸೇನಾ ವಾಹನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


