ಕಾಶ್ಮೀರ ಸಮಸ್ಯೆಗೆ ಪರಿಹಾರ ಆರಂಭವಾಗಿದೆ: ನಟ ಅನುಪಮ್ ಖೇರ್
ದಶಕಗಳಿಂದಲೂ ಭಾರತಕ್ಕೆ ನುಂಗಲಾರದ ತುತ್ತಾಗಿದ್ದ ಜಮ್ಮು ಮತ್ತು ಕಾಶ್ಮೀರ ಸಮಸ್ಯೆಗೆ ಪರಿಹಾರ ಆರಂಭವಾಗಿದೆ ಎಂದು ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್ ಮಾರ್ಮಿಕವಾಗಿ ಹೇಳಿದ್ದಾರೆ.

Published On :
ಮುಂಬೈ: ದಶಕಗಳಿಂದಲೂ ಭಾರತಕ್ಕೆ ನುಂಗಲಾರದ ತುತ್ತಾಗಿದ್ದ ಜಮ್ಮು ಮತ್ತು ಕಾಶ್ಮೀರ ಸಮಸ್ಯೆಗೆ ಪರಿಹಾರ ಆರಂಭವಾಗಿದೆ ಎಂದು ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್ ಮಾರ್ಮಿಕವಾಗಿ ಹೇಳಿದ್ದಾರೆ.
ಪ್ರಸ್ತುತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗಿರುವ ಪ್ರಕ್ಷುಬ್ಧತೆ ಕುರಿತಂತೆ ಟ್ವೀಟ್ ಮಾಡಿರುವ ನಟ ಅನುಪಮ್ ಖೇರ್, ಕಾಶ್ಮೀರ ಸಮಸ್ಯೆಗೆ ಪರಿಹಾರ ಆರಂಭವಾಗಿದೆ ಎಂದು ಹೇಳಿದ್ದಾರೆ.
ನಟ ಅನುಪಮ್ ಖೇರ್ ಅವರ ಈ ಟ್ವೀಟ್ ಇದೀಗ ವೈರಲ್ ಆಗಿದ್ದು, ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದಾಗಲಿದೆಯೇ..? ಕಾಶ್ಮೀರವನ್ನು 2 ರಾಜ್ಯಗಳಾಗಿ ಇಬ್ಬಾಗ ಮಾಡುವ ಸಾಧ್ಯತೆ ಇದೆಯೇ? ಅಥವಾ ಕಣಿವೆ ರಾಜ್ಯಕ್ಕೆ ವಿಶೇಷ ಹಕ್ಕು ನೀಡುವ ಸಂವಿಧಾನದ ಕಲಂ 370 ಮತ್ತು 35ಎ ತಿದ್ದುಪಡಿಯಾಗಲಿದೆಯೇ ಎಂಬಿತ್ಯಾದಿ ಪ್ರಶ್ನೆಗಳು ಮೂಡಲಾರಂಭಿಸಿವೆ.
ಈ ಹಿಂದೆಯೂ ಕೂಡ ಅನುಪಮ್ ಖೇರ್ ಅವರು ಸಾಕಷ್ಟು ಬಾರಿ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಧನಿ ಎತ್ತಿದ್ದರು. ಪ್ರಮುಖವಾಗಿ ಕಾಶ್ಮೀರಿ ಪಂಡಿತರ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದ ಅವರು, ಕಾಶ್ಮೀರಿ ಪಂಡಿತರನ್ನು ಪುನಃ ಕಾಶ್ಮೀರಕ್ಕೆ ಕರೆತರುವ ಪ್ರಯತ್ನಕ್ಕೆ ಬೆಂಬಲ ನೀಡಿದ್ದರು.
Kashmir Solution has begun.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mumbaiಮುಂಬೈಜಮ್ಮು ಮತ್ತು ಕಾಶ್ಮೀರJammu and KashmirModi governmentಮೋದಿ ಸರ್ಕಾರAnupam Kherಅನುಪಮ್ ಖೇರ್Kashmir Uncertaintyಕಾಶ್ಮೀರ ಅನಿಶ್ಚಿತತೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


