ಪಾಕ್ ಆಕ್ರಮಿತ ಕಾಶ್ಮೀರಕ್ಕಾಗಿ ಪ್ರಾಣ ಬೇಕಾದರೂ ಕೊಡುತ್ತೇವೆ: ಕಾಂಗ್ರೆಸ್‌ಗೆ ಅಮಿತ್ ಶಾ ಚಾಟಿ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ 370 ಕಲಂ ರದ್ದು ಮಾಡಿರುವುದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್...
Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ 370 ಕಲಂ ರದ್ದು ಮಾಡಿರುವುದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಸಹ ಸೇರುತ್ತದೆ. ಪಿಒಕೆಗಾಗಿ ಪ್ರಾಣಬೇಕಾದರೂ ಕೊಡುತ್ತೇವೆ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ವಿಧೇಯಕಯವನ್ನು ಲೋಕಸಭೆಯಲ್ಲಿ ಅಮಿತ್ ಶಾ ಅವರು ಮಂಡನೆ ಮಾಡಿದರು. ಈ ವೇಳೆ ವಿರೋಧ ಪಕ್ಷದ ನಾಯಕರು ಗದ್ದಲ ಎಬ್ಬಿಸಿದರು. ಆರ್ಟಿಕಲ್ 370ಯನ್ನು ರದ್ದು ಮಾಡಬಾರದಿತ್ತು. ಈ ವಿಚಾರ ವಿಶ್ವಸಂಸ್ಥೆಯಲ್ಲಿದೆ ಎಂದು ಹೇಳಿದರು.
ಈ ವೇಳೆ ಕಾಂಗ್ರೆಸ್ ಸಂಸದರನ್ನು ಅಮಿತ್ ಶಾ ಪ್ರಶ್ನಿಸಿದ್ದು ಕಾಶ್ಮೀರದ ಕುರಿತು ನಿಮ್ಮ ನಿಲುವೇನು. ಕಾಶ್ಮೀರದ ಸಮಸ್ಯೆಯನ್ನು ಹಾಗೆ ಉಳಿಸಿಕೊಂಡು ಬರಬೇಕಿತ್ತಾ ಎಂದು ಪ್ರಶ್ನಿಸಿದರು ಈ ವೇಳೆ ಕಾಂಗ್ರೆಸ್ ನಾಯಕರು ಸುಮ್ಮನಾದರು.
ನಾವು ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಮಾತನಾಡಿದರೆ ಅದರಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಸಹ ಸೇರುತ್ತದೆ. ಪಾಕ್ ಆಕ್ರಮಿತ ಕಾಶ್ಮೀರ ಇದರಲ್ಲಿ ಸೇರುವುದಿಲ್ಲ ಎಂದು ಹೇಳಿದರೆ ಅದನ್ನು ವಶಪಡಿಸಿಕೊಳ್ಳಲು ನಾವು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಅಮಿತ್ ಶಾ ಹೇಳಿದರು.
ಸಂವಿಧಾನದ ಪ್ರಕಾವೇ ನಾವು ಈ ನಿರ್ಧಾರ ಕೈಗೊಂಡಿದ್ದೇವೆ.
ನಮ್ಮ ಪ್ರಸ್ತಾಪಕ್ಕೆ ರಾಷ್ಟ್ರಪತಿಗಳು ಅಂಕಿತಾ ಹಾಕಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

