ದೇಶ

ಅಸ್ಸಾಂ: ಐಎಎಫ್‌ ಸುಖೋಯ್ ಫೈಟರ್ ಜೆಟ್ ಅಪಘಾತ, ಪೈಲಟ್‌ಗಳು ಪಾರು

ಅಸ್ಸಾಂ ನ ತೇಜ್ಪುರ್ ಸಮೀಪ ಗುರುವಾರ ಸಂಜೆ ಸುಖೋಯ್ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಸ್ಸಾಂ: ಐಎಎಫ್‌  ಸುಖೋಯ್ ಫೈಟರ್ ಜೆಟ್ ಅಪಘಾತ, ಪೈಲಟ್‌ಗಳು ಪಾರು
ಅಸ್ಸಾಂ: ಐಎಎಫ್‌ ಸುಖೋಯ್ ಫೈಟರ್ ಜೆಟ್ ಅಪಘಾತ
Published On :
ತೇಜ್ಪುರ್(ಅಸ್ಸಾಂ): ಅಸ್ಸಾಂ ನ ತೇಜ್ಪುರ್ ಸಮೀಪ ಗುರುವಾರ ಸಂಜೆ ಸುಖೋಯ್ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವಿಮಾನ ಅಪಘಾತದ ವೇಳೆ ವಿಮಾನದಲ್ಲಿದ್ದ ಇಬ್ಬರೂ ಪೈಲಟ್ ಗಳು ಸುರಕ್ಷಿತವಾಗಿದ್ದಾರೆ. ಘಟನೆ ಕುರಿತು ವಿಚಾರಣೆ ನಡೆಯಲಿದೆ ಎಂದು ಮೂಲಗಳು ಹೇಳಿದೆ.
ಗುರುವಾರ ಸಂಜೆ ತೇಜ್ಪುರದಲ್ಲಿ ನಿತ್ಯದ ತರಬೇತಿ ಹಾರಾಟ ನಡೆಸುತ್ತಿದ್ದ ಸುಖೋಯ್ -30 ಫೈಟರ್ ಜೆಟ್ ಅಪಘಾತಕ್ಕೀಡಾಗಿದೆ.ವಿಮಾನವು ತೇಜ್‌ಪುರದ ಮಿಲನ್‌ಪುರ ಪ್ರದೇಶದಲ್ಲಿ ಅಪಘಾತ ಸಂಭವಿಸಿದ ಕೂಡಲೇ ಬೆಂಕಿ ಕಾಣಿಸಿಕೊಂಡಿದೆ. ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಅಪಘಾತ ಸಂಭವಿಸಿದೆ.
ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಇವರಿಬ್ಬರನ್ನು ರಕ್ಷಿಸಿ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಕಳೆದ ಜೂನ್‌ನಲ್ಲಿ ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ನಡೆದ ಐಎಎಫ್‌ನ ಸಾರಿಗೆ ವಿಮಾನ ಅಪಘಾತದ ಬಳಿಕ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.