370 ನೇ ವಿಧಿ ರದ್ದು ಸರ್ದಾರ್ ಪಟೇಲ್, ವಾಜಪೇಯಿ ಕನಸನ್ನು ನನಸಾಗಿಸಿದೆ: ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Published On :
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
"ನಾನು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಇಡೀ ರಾಷ್ಟ್ರದ ಜನರನ್ನು ಅಭಿನಂದಿಸುತ್ತೇನೆ. ಕೆಲವು ವಿಷಯಗಳು ಜೀವಂತವಿರುವವರೆಗೂ ಅವು ಎಂದಿಗೂ ಬದಲಾಗುವುದಿಲ್ಲ ಅಥವಾ ದೂರ ಹೋಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. 370 ನೇ ವಿಧಿ ಇದೇ ರೀತಿಯದಾಗಿತ್ತು." ಎಂದು ಪ್ರಧಾನಿ ಹೇಳಿದರು.
"ಸರ್ದಾರ್ ಪಟೇಲ್, ಬಾಬಾ ಸಾಹೇಬ್ ಅಂಬೇಡ್ಕರ್, ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಜೀ ಮತ್ತು ಕೋಟ್ಯಂತರ ದೇಶಭಕ್ತರ ಕನಸು ಈಡೇರಿದೆ.
"ನಾವು ಒಂದು ರಾಷ್ಟ್ರವಾಗಿ, ಒಂದು ಕುಟುಂಬವಾಗಿ, ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಸಹೋದರರು ಮತ್ತು ಸಹೋದರಿಯರು ಅನೇಕ ಹಕ್ಕುಗಳಿಂದ ವಂಚಿತರಾಗಿದ್ದಾರೆ ಮತ್ತು ಅವರ ಅಭಿವೃದ್ಧಿಗೆ ಇದು ಒಂದು ದೊಡ್ಡ ಅಡಚಣೆ ಇದ್ದಿತ್ತು, ಇದೀಗ ವಿಶೇಷ ಸ್ಥಾನಮಾನ ರದ್ದು ಆಗಿರುವುದರಿಂದ ಅವರೂ ದೇಶದ ಉಳಿದ ರಾಜ್ಯಗಳ ನಾಗರಿಕರಂತೆ ಅಭಿವೃದ್ದಿಯ ಹಾದಿಯಲ್ಲಿ ಮುಂದುವರಿಯಬಹುದು." "ಮೋದಿ ಹೇಳಿದರು.
"ವಿಶೇಷ ಸ್ಥಾನಮಾನದ ಕಾರಣ, ಜಮ್ಮು ಮತ್ತು ಕಾಶ್ಮೀರಕ್ಕೆ ನಿಜವಾಗಿ ಸಿಗಬೇಕಿದ್ದ ಅಭಿವೃದ್ಧಿ ಅವಕಾಶವನ್ನು ಪಡೆಯಲು ಸಾಧ್ಯವಾಗಲಿಲ್ಲ" ಎಂದು ಅವರು ಹೇಳಿದರು.
"ಈಗ, ಜಮ್ಮು ಮತ್ತು ಕಾಶ್ಮೀರಕ್ಕೂ ಭಾರತದ ಉಳಿದ ಭಾಗಗಳಂತೆ ಅಭಿವೃದ್ಧಿಯ ಫಲ ಸಿಗಲಿದೆ" ಎಂದು ಪ್ರಧಾನಿ ಹೇಳಿದರು.
ಜಮ್ಮು ಕಾಶ್ಮೀರ ಜನರು ಇತರ ರಾಜ್ಯಗಳಿಗೆ ಅನ್ವಯಿಸುವ ಕಾನೂನುಗಳು ಮತ್ತು ಯೋಜನೆಗಳ ಪ್ರಯೋಜನಗಳಿಂದ ವಂಚಿತರಾಗಿದ್ದರು. ಈಗ ಅವರು ಇತರ ರಾಜ್ಯಗಳ ಜನರಂತೆ ಆರೋಗ್ಯ ಮತ್ತು ಶಿಕ್ಷಣದ ಪ್ರಯೋಜನಗಳನ್ನು ಸಹ ಪಡೆಯುತ್ತಾರೆ" ಎಂದು ಪ್ರಧಾನಿ ಹೇಳಿದರು.
"ಜಮ್ಮು ಮತ್ತು ಕಾಶ್ಮೀರವನ್ನು ನೇರವಾಗಿ ಕೇಂದ್ರ ಆಡಳಿತದಲ್ಲಿ ತರುವ ಬಗೆಗೆ ಚೆನ್ನಾಗಿ ಯೋಚಿಸಲಾಗಿದೆ. ಮತ್ತು ಇದು ಸ್ವಲ್ಪ ಸಮಯದವರೆಗೆ ಮುಂದುವರಿಯಲಿದೆ.
"ರಾಜ್ಯಪಾಲರ ಆಡಳಿತವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಗೆ ತಂದಾಗಿನಿಂದ, ರಾಜ್ಯದ ಆಡಳಿತ ನಿರ್ವಾಹಕರು ಕೇಂದ್ರದೊಡನೆ ನೇರ ಸಂಪರ್ಕದಲ್ಲಿದ್ದಾರೆ., ಇದರಿಂದಾಗಿ ಉತ್ತಮ ಆಡಳಿತದ ಪರಿಣಾಮಗಳನ್ನು ನಾವಿಂದು ಕಾಣುತ್ತಿದ್ದೇವೆ.
"370 ನೇ ವಿಧಿ ಜಮ್ಮು, ಕಾಶ್ಮೀರ ಮತ್ತು ಲಡಾಖ್ ಜನರ ಮೇಲೆ ಹೇಗೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬುದರ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಮತ್ತು ಆಶ್ಚರ್ಯಕರ ಸಂಗತಿಯೆಂದರೆ, ಈ ವಿಧಿಯು ಜನರಿಗೆ ಹೇಗೆ ಪ್ರಯೋಜನವನ್ನು ನೀಡಿತು ಎಂಬುದನ್ನು ಯಾರೂ ನಿಜವಾಗಿಯೂ ಹೇಳಲು ಸಾಧ್ಯವಾಗಲಿಲ್ಲ" ಎಂದು ಅವರು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಜನರಿಗೆ ತಮ್ಮ ಸ್ಥಳೀಯ ಪ್ರತಿನಿಧಿಗಳನ್ನು ಮೊದಲಿನಂತೆಯೇ ಆಯ್ಕೆ ಮಾಡುವುದಕ್ಕೆ ಅವಕಾಶವಿರಲಿದೆ ಎಂದು ಮೋದಿ ಹೇಳಿದ್ದಾರೆ.
"ಅವರು ಮುಕ್ತ ಮತ್ತು ನ್ಯಾಯಯುತವಾದ ಪಂಚಾಯತ್ ಚುನಾವಣೆಗಳನ್ನುಕಾಣಲಿದ್ದಾರೆ. ಅದೇ ರೀತಿ ವಿಧಾನಸಭಾ ಚುನಾವಣೆಗಳು ಸಹ ನಡೆಯಲಿವೆ. ಎರಡು-ಮೂರು ದಶಕಗಳಿಂದ ಬಾಕಿ ಇರುವ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಅನ್ನು ನೇಮಕ ಮಾಡುವಂತೆ ನಾನು ರಾಜ್ಯಪಾಲರನ್ನು ಒತ್ತಾಯಿಸುತ್ತೇನೆ" ಎಂದು ಪ್ರಧಾನಿ ಹೇಳಿದರು.
"ಜಮ್ಮು ಮತ್ತು ಕಾಶ್ಮೀರದ ಜನರಿಗೆ ಶೀಘ್ರದಲ್ಲೇ ಮುಕ್ತ ಮತ್ತು ನ್ಯಾಯಯುತ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಅವಕಾಶ ದೊರಕಲಿದೆ ಎಂದು ನಾನು ಭರವಸೆ ನೀಡುತ್ತೇನೆ" ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


