'ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕದಡಲು ಯತ್ನಿಸಿದರೆ ಗುಂಡೇಟು ಗ್ಯಾರೆಂಟಿ'!
ಆರ್ಟಿಕಲ್ 370 ರದ್ದು ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕದಡಲು ಯತ್ನಿಸುವವರನ್ನು ಹೊಡೆದುರುಳಿಸಲಾಗುವುದು

ನವದೆಹಲಿ: ಆರ್ಟಿಕಲ್ 370 ರದ್ದು ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕದಡಲು ಯತ್ನಿಸುವವರನ್ನು ಹೊಡೆದುರುಳಿಸಲಾಗುವುದು ಎಂದು ಭಾರತೀಯ ಸೇನೆ ಎಚ್ಚರಿಕೆ ನೀಡಿದೆ.
ಗೃಹ ಸಚಿವ ಅಮಿತ್ ಶಾ ಆರ್ಟಿಕಲ್ 370 ರದ್ದುಗೊಳಿಸಿದ ನಂತರ ಪಾಕಿಸ್ತಾನ ಸೇನೆ ಹಾಗೂ ಅಲ್ಲಿನ ಸರ್ಕಾರ ಭಾರತದ ಮೇಲೆ ದಾಳಿ ನಡೆಯುವ ಸಾಧ್ಯತೆಗಳ ಬಗ್ಗೆ ಪದೇ ಪದೇ ಹೇಳಿಕೆ ನೀಡುತ್ತಿವೆ.
ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಕಣಿವೆ ಕಲ್ಲುತೂರಾಟಗಾರರಿಗೆ ಈಗಲೇ ಎಚ್ಚರಿಕೆ ನೀಡುತ್ತಿದೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಕಮಾಂಡಾರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲೋನ್, ಪಾಕಿಸ್ತಾನ ಹಾಗೂ ಅಲ್ಲಿನ ಸೇನೆ ಕಾಶ್ಮೀರದಲ್ಲಿ ಶಾಂತಿ ಕದಡಲು ಯತ್ನಿಸುತ್ತಲೇ ಇವೆ. ಇದು ಈಗಲೂ ಮುಂದುವರೆಯುತ್ತದೆ ಎನಿಸುತ್ತಿದೆ.
ಕಣಿವೆ ಭಾಗದಲ್ಲಿ ನಿರ್ದಿಷ್ಟ ಘಟನೆಗಳು ನಡೆಯಲಿವೆ ಎಂದು ಪಾಕ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಸೇನೆಯ ಬಗ್ಗೆ ನಾವು ಗಮನ ವಹಿಸುತ್ತೇವೆ. ಒಂದು ವೇಳೆ ಯಾರಾದರೂ ಕಾಶ್ಮೀರದಲ್ಲಿ ಶಾಂತಿ ಕದಡಲು ಯತ್ನಿಸಿದರೆ ಅವರನ್ನು ಮುಲಾಜಿಲ್ಲದೇ ಗುಂಡಿಕ್ಕಿ ಕೊಲ್ಲಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


